ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

0

ಬೆಳಗಾವಿ, ಜ. 29 : 2020-21ನೇ ಸಾಲಿಗೆ ಬೆಳಗಾವಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಮಚ್ಛೆ, ರಾಮತೀರ್ಥ ನಗರ (ಬೆಳಗಾವಿ), ಹುಕ್ಕೇರಿ, ರಾಯಬಾಗ, ಅಥಣಿ, ಗೋಕಾಕ, ಬೈಲಹೊಂಗಲ, ಮೂಡಲಗಿ, ಸವದತ್ತಿ ಹಾಗೂ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ

ಬಾಲಕಿಯರ ವಿದ್ಯಾರ್ಥಿನಿಲಯ, ಸುಭಾಷ ನಗರ-1 & 2(ಬೆಳಗಾವಿ) ಹಾಗೂ ಗೋಕಾಕ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಿದೆ.

ಮಾನ್ಯ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರುರವರು ನೀಡಿರುವ ಸೂಚನೆ ಮತ್ತು ಪ್ರಮಾಣಿತ ಕಾರ್ಯಾಚರಣೆ ವಿಧಾನ(SOP) ಮಾರ್ಗಸೂಚಿಯನ್ವಯ ಮಂಜೂರಾತಿಯ ಸಾಮಥ್ರ್ಯದ ಶೇ.75ರಷ್ಷು ಮಾತ್ರ ದಾಖಲಾತಿ ಪಡೆಯಲು ಅನುಮತಿ ನೀಡಿರುತ್ತಾರೆ.
ಅದರಂತೆ ನವೀಕರಣ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಿ, ಉಳಿಕೆ ಖಾಲಿ ಇರುವ ಸ್ಥಾನಗಳಿಗೆ ಪ್ರವೇಶಕ್ಕಾಗಿ ಮೆಟ್ರಿಕ್ ನಂತರದ ವಿವಿಧ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಿದೆ.

ನಿಗದಿತ ನಮೂನೆಯ ಅರ್ಜಿ ಪಡೆದು ತೇರ್ಗಡೆಯಾದ ಅಂಕಪಟ್ಟಿ ಮತ್ತು ಜಾತಿ ಆದಾಯ ಪ್ರಮಾಣ ಪತ್ರ,  ವಾಸಸ್ಥಳದ ದೃಢೀಕೃತ ಪ್ರಮಾಣ ಪತ್ರ ಹಾಗೂ ಕಾಲೇಜಿನ ಪ್ರಾಂಶುಪಾಲರಿಂದ ಪ್ರವೇಶ ಪಡೆದ ಬಗ್ಗೆ ದೃಢೀಕೃತ ಪ್ರಮಾಣ ಪತ್ರದ ಜಿರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಫೆಬ್ರುವರಿ 10ರೊಳಗಾಗಿ ಸಂಬಂಧಪಟ್ಟ ತಾಲ್ಲೂಕಿನ ವಿದ್ಯಾರ್ಥಿನಿಲಯ, ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಾರ್ಯಾಲಯ, ಬೆಳಗಾವಿ ಅರ್ಜಿ ಸಲ್ಲಿಸಬೇಕು ಹಾಗೂ ನಿಗದಿಪಡಿಸಿದ ದಿನಾಂಕದ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಎಂದು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ: 0831-2950349, 9742023008, 9008639376, 7026223373 ಗೆ ಸಂಪರ್ಕಿಸಿ.