ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ ಇಲಾಖೆಯ ಸಹಯೋಗದೊಂದಿಗೆ ಕೋಟ್ಪಾ-2003 ಕಾಯ್ದೆಯಡಿಯಲ್ಲಿ ದಾಳಿ

0

ಬೆಳಗಾವಿ : ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ ಇಲಾಖೆಯ ಸಹಯೋಗದೊಂದಿಗೆ  ದಿನಾಂಕ 29.1.2021 ಬೆಳಗಾವಿಯ ಕಿತ್ತೂರ ಗ್ರಾಮದಲ್ಲಿ ಕೋಟ್ಪಾ-2003 ಕಾಯ್ದೆಯಡಿಯಲ್ಲಿ ದಾಳಿಯನ್ನು ಹಮ್ಮಿಕೊಳ್ಳಲಾಯಿತು.
ಜಿಲ್ಲಾ ತಂಬಾಕು ನಿಯಂತ್ರಣಾಧಿಕಾಗಳ ಮಾರ್ಗದರ್ಶನದಡಿಯಲ್ಲಿ ದಾಳಿಯಲ್ಲಿ ಸಾರ್ವಜನಿಕರಿಗೆ ಕೋಟ್ಪಾ-2003 ಕಾಯ್ದೆ ವಿರುದ್ದವಾಗಿ ಸಾರ್ವಜನಿಕ ಸ್ಥಳಗಳಲ್ಲಿ ದೂಮಪಾನ ಮಾಡುವ ಮತ್ತು ನೇರ ಪರೋಕ್ಷವಾಗಿ ತಂಬಾಕು ಜಾಹಿರಾತು ಪ್ರದರ್ಶನ, ಶೈಕ್ಷಣಿಕ ಆವರಣದ 100 ಮೀಟರ ಅಂತರದೋಳಗೆ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿ ಮಾಲಿಕರಿಗೆ ಜಾಗೃತಿ ಮೂಡಿಸಿ ಹಾಗು ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳನ್ನು ತಿಳಿಸಲಾಯಿತು.

ಕೋಟ್ಪಾ-2003 ಕಾಯ್ದೆ ಅಡಿಯಲ್ಲಿ ಒಟ್ಟು 22 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಯಿತು ಹಾಗೂ ಸೆಕ್ಷನ್-4 ನಾಮಫಲಕವನ್ನು ವಿತರಿಸಲಾಯಿತು. ಹಾಗೂ ಸಾರ್ವಜನಿಕರಲ್ಲಿ ತಂಬಾಕು ಸೇವನೆಯ ದುಷ್ಪರೀಣಾಮದ ಕುರಿತು ಅರಿವು ಮೂಡಿಸಲಾಯಿತು. ಸದರಿ ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಡಾ.ಶ್ವೇತಾ ಪಾಟೀಲ ಜಿಲ್ಲಾ ಸಲಹೆಗಾರರು, ಕವಿತಾ ರಾಜನ್ನವರ ಜಿಲ್ಲಾ ಸಮಾಜ ಕಾರ್ಯಕತೆ, ಶನ್ಮುಖ ಪೊಜೇರಿ ಹಿರಿಯ ಆರೋಗ್ಯ ಸಹಾಯಕರು ಪೊಲೀಸ ಸಿಬಂದ್ದಿಗಳು ಸದರಿ ದಾಳಿಯಲ್ಲಿ ಉಪಸ್ಥಿತರಿದ್ದರು.