ಬೆಳಗಾವಿ ಜನೇವರಿ 30: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಸಾರ್ವಜನಿಕ ಭಕ್ತಾದಿಗಳಿಗೆ ಫೆ.1 ರಿಂದ ಅನ್ವಯವಾಗುವಂತೆ ದೇವಿಯ ದರ್ಶನಕ್ಕೆ ಶರತ್ತುಬದ್ಧ ಅವಕಾಶವನ್ನು ಕಲ್ಪಿಸಿ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ.
ಶ್ರೀ ದೇವಿ ದರ್ಶನಕ್ಕೆ ಆಗಮಿಸುವ ಸಾರ್ವಜನಿಕ ಭಕ್ತಾದಿಗಳಿಗೆ ಸಾಮಾಜಿಕ ಅಂತರದೊಂದಿಗೆ ಸರದಿ ಸಾಲಿನಲ್ಲಿ ಸರಾಗವಾಗಿ ಸಾಗಲು ವ್ಯವಸ್ಥೆ ಮಾಡಿ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು.
ಸರ್ಕಾರದ ಮಾರ್ಗಸೂಚಿಯಲ್ಲಿ ಅತ್ಯಂತ ಪ್ರಮುಖವಾಗಿ ವಿಧಿಸಿದ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಯ ನಿಯಮವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದು ಹಾಗೂ ಮಾಸ್ಕ್ ಧರಿಸುವುದು, ತರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ಬಳಸಿ ಕೈ ತೊಳೆದುಕೊಳ್ಳುವುದನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.
ದೇವಾಲಯದ ಅವರಣದಲ್ಲಿ ಯಾವುದೇ ವಾಣಿಜ್ಯ ಸಂಕೀರ್ಣಗಳನ್ನು ಹಾಗೂ ಅಂಗಡಿ-ಮುಂಗಟ್ಟುಗಳನ್ನು ಆರಂಭಿಸಲು ಅನುಮತಿ ಇರುವುದಿಲ್ಲ.
ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಆಡಳಿತದವರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005 ರ ನಿಯಮಗಳಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಎಂ.ಜಿ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.