ಬೆಳಗಾವಿ ಜಿಲ್ಲೆಯನ್ನು ಕುಷ್ಠರೋಗ ಮುಕ್ತಗೊಳಿಸಬೇಕು : ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

0

ಬೆಳಗಾವಿ ಜನೇವರಿ 30: ಕುಷ್ಠರೋಗ ಬಾಧಿತರಾದವರನ್ನು ಪತ್ತೆಹಚ್ಚಿ ಗುಣಮುಖರನ್ನಾಗಿಸಿ ಅವರನ್ನು ಸಮಾಜದ ಮುಖ್ಯವಾಹಿನಿಯಲ್ಲಿ ತರಬೇಕು. ಬೆಳಗಾವಿ ಜಿಲ್ಲೆಯನ್ನು ಕುಷ್ಠರೋಗ ಮುಕ್ತವನ್ನಾಗಿಸಲು ಸನ್ನದ್ದರಾಗಿದ್ದೇವೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದರು.
ರಾಷ್ಟೀಯ ಆರೋಗ್ಯ ಅಭಿಯಾನ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಕುಷ್ಠರೋಗ ವಿಭಾಗ ಇವರ ಸಹಯೋಗದಲ್ಲಿ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ಮತ್ತು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 72 ನೇ ಪುಣ್ಯಸ್ಮರಣೆ ಹಾಗೂ ಹುತಾತ್ಮರ ದಿನದ ಅಂಗವಾಗಿ ಶನಿವಾರ (ಜ.30) ರಂದು ಜಿಲ್ಲಾಧಿಕಾರಗಳ ಕಛೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.
ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿಗಳಾದ ಡಾ.ಚಾಂದನಿ ಗೌ.ದೇವಡಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಎಮ್.ವ್ಹಿ.ಕಿವಡಸಣ್ಣವರ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.