ಜ. 31 ರಂದು ಸುಗ್ಗಿ ಹುಗ್ಗಿ 2020 ಗ್ರಾಮೀಣ ಜಾನಪದ ಕಲಾ ಸಂಭ್ರಮ : ಸಹಾಯಕ ನಿರ್ದೇಶಕರಾದ ವಿದ್ಯಾವತಿ ಹೆಚ್. ಭಜಂತ್ರಿ

0

ಬೆಳಗಾವಿ ಜನೇವರಿ 30 : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಸುಗ್ಗಿ ಹುಗ್ಗಿ -2020 ಗ್ರಾಮೀಣ ಜಾನಪದ ಕಲಾ ಸಂಭ್ರಮ ಭಾನುವಾರ ಜ. 31 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಕುಮಾರ ಗಂಧರ್ವ ಕಲಾ ಮಂದಿರದವರೆಗೆ ಭವ್ಯ ಮೆರವಣಿಗೆ ಮತ್ತು ಕುಮಾರ ಗಂಧರ್ವ ಕಲಾ ಮಂದಿರ ಆವರಣದಲ್ಲಿ 3:30 ಗಂಟೆಗೆ ರಾಶಿ ಕಣ ಪೂಜೆ ಹಾಗೂ ಸಂಜೆ 4 ಗಂಟೆಗೆ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಬೆಳಗಾವಿ ಉತ್ತರ ಭಾಗದ ಶಾಸಕರಾದ ಅನೀಲ ಬೆನಕೆ ಅವರು ಅಧ್ಯಕ್ಷತೆ ವಹಿಸಲಿದ್ದು, ಜಲಸಂಪೂನ್ಮೂಲ (ಭಾರಿ ಮತ್ತು ಮಧ್ಯಮ ನೀರಾವರಿ) ಸಚಿವರಾದ ರಮೇಶ ಲ. ಜಾರಕಿಹೊಳಿ ಅವರು ಉದ್ಘಾಟಿಸಲಿದ್ದಾರೆ.

ಉಪ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಇಲಾಖೆ ಸಚಿವರಾದ ಲಕ್ಷ್ಮಣ ಸವದಿ ಅವರು ಘನ ಉಪಸ್ಥಿತರಿರುವರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಶಶಿಕಲಾ ಅ. ಜೊಲ್ಲೆ, ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಶ್ರೀಮಂತ ಪಾಟೀಲ ಮತ್ತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಉಮೇಶ ವಿ. ಕತ್ತಿ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ತು ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ್ ಕವಟಗಿಮಠ ಮತ್ತು ಕರ್ನಾಟಕ ವಿಧಾನ ಸಭೆ ಉಪ ಸಭಾಧ್ಯಕ್ಷರಾದ ವಿಶ್ವನಾಥ (ಆನಂದ) ಚ. ಮಾಮನಿ, ಅಥಣಿ ಮತ ಕ್ಷೇತ್ರದ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಮಹೇಶ್ ಕಮಠಳ್ಳಿ, ನವದೆಹಲಿಯ

ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್, ರಾಯಬಾಗ ಮತ ಕ್ಷೇತ್ರದ ಆದಿ ಜಾಂಬವ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರಾದ ದುರ್ಯೋಧನ ಐಹೊಳೆ, ಕರ್ನಾಟಕ ರಾಜ್ಯ ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷರು ಹಾಗೂ ಶಾಸಕರಾದ ಪಿ. ರಾಜೀವ ಮತ್ತು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಆಶಾ ಐಹೊಳೆ ಅವರು ಭಾಗವಹಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವಿದ್ಯಾವತಿ ಹೆಚ್. ಭಜಂತ್ರಿ ಅವರು ತಿಳಿಸಿದ್ದಾರೆ.