ಮುಂಬೈ ಕರ್ನಾಟಕಕ್ಕೆ ಸೇರಬೇಕು; ಮಹಾ ಸಿಎಂ ಗೆ ಮತ್ತೆ ತಿರುಗೇಟು ನೀಡಿದ ಡಿಸಿಎಂ ಸವದಿ

0

ಮಂಗಳೂರು: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ರಾಜ್ಯದ ಎರಡನೇ ರಾಜಧಾನಿ ಎಂಬುದು ಗೊತ್ತಿದ್ದೂ ಉದ್ಧವ್ ಠಾಕ್ರೆ ಉದ್ಧಟತನ ಹೇಳಿಕೆ ಸರಿಯಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಸವದಿ, ಮಹಾರಾಷ್ಟ್ರ ಸರ್ಕಾರ ಮನೆಯೊಂದು ಮೂರು ಬಾಗಿಲಿನಂತಾಗಿದೆ. ತಮ್ಮ ವೈಫಲ್ಯ ಮುಚ್ಚಿಟ್ತುಕೊಂಡು, ಜನರ ಗಮನ ಬೇರೆಡೆ ಸೆಳೆಯಲು ಗಡಿ ವಿಚಾರದ ಬಗ್ಗೆ ಕ್ಯಾತೆ ತೆಗೆಯುತ್ತಿದ್ದಾರೆ ಎಂದರು.

ಬೆಳಗಾವಿ, ನಿಪ್ಪಾಣಿ, ಕಾರವಾರದಲ್ಲಿ ಮರಾಠಿಗರು ಹೆಚ್ಚಿದ್ದಾರೆ ಎಂದ ಮಾತ್ರಕ್ಕೆ ಆ ಪ್ರದೇಶ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಉದ್ಧವ್ ಠಾಕ್ರೆ ಹೇಳುವುದಾದರೆ ಮುಂಬೈ ಕರ್ನಾಟಕ್ಕೆ ಸೇರಬೇಕು. ಯಾಕೆಂದರೆ ಅಲ್ಲಿ ಉತ್ತರ ಕನ್ನಡ, ಕರಾವಳಿ ಭಾಗದ ಅನೇಕ ಕನ್ನಡಿಗರು ಮುಂಬೈನಲ್ಲಿ ನೆಲೆಸಿದ್ದಾರೆ. ಹಾಗಾಗಿ ಮುಂಬೈ ಕರ್ನಾಟಕ್ಕೆ ಸೇರಲಿ ಎಂದು ಹೇಳಿದರು.