ಮಹದಾಯಿ ನೀರು ಬಳಕೆಗೆ ಕ್ರಮ

0

ಬೆಳಗಾವಿ, ಫೆ. 3- ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಯ ಅನುಷ್ಠಾನ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಶೀಘ್ರದಲ್ಲಿಯೇ ಕಾಮ ಗಾರಿ ಪ್ರಾರಂಭಕ್ಕೆ ಕ್ರಮ ಕೈಗೊಳ್ಳುವ ಕುರಿತು ಮುಖ್ಯಮಂತ್ರಿ ಜೊತೆ ಚರ್ಚಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ‌ ಭರವಸೆ ನೀಡಿದರು.

ತಮ್ಮನ್ನು ಬೆಂಗಳೂರಿನಲ್ಲಿ ಭೇಟಿಯಾದ ಮಹದಾಯಿ ಹೋರಾಟಗಾರರು ಮತ್ತು ನವಲಗುಂದದ ರೈತ ಮುಖಂಡರ ನಿಯೋಗದೊಂದಿಗೆ ಮಾತನಾಡಿದ ಸಚಿವರು, ‘ನಮ್ಮ ಪಾಲಿನ‌ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ನಮ್ಮ ಹಕ್ಕು’ ಎಂದು ಹೇಳಿದರು.

‘ಅತಿವೃಷ್ಟಿಯಿಂದ ರೈತರ ಬೆಳೆ ಹಾಳಾಗಿದ್ದು, ಕೂಡಲೇ ಬೆಳೆ ವಿಮೆ ಮತ್ತು ಪರಿಹಾರದ ಹಣ ಬಿಡುಗಡೆ ಮಾಡುವ ಕುರಿತು ಕ್ರಮ ಕೈಗೊಳ್ಳ ಲಾಗುವುದು’ ಎಂದು ಭರವಸೆ ನೀಡಿದರು.

ನವಲಗುಂದ ಶಾಸಕ ಶಂಕರಪಾಟೀಲ ಮುನೇನಕೊಪ್ಪ, ಮಹದಾಯಿ ಹೋರಾಟ ಸಮಿತಿಯ ಅಧ್ಯಕ್ಷ ದ್ಯಾಮಪ್ಪಯ್ಯ ಹಾಗೂ ರೈತ ಮುಖಂಡರು ಇದ್ದರು…