ಜಯಂತಿಗಳ ಸರಳ ಆಚರಣೆ: ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ

0

ಬೆಳಗಾವಿ ಫೆ.03 : ಇದೇ ಫೆಬ್ರುವರಿ ತಿಂಗಳಿನಲ್ಲಿ ನಡೆಯಲಿರುವ ಶ್ರೀ ಸಂತ ಸೇವಾಲಾಲ, ಸವಿತಾ ಮಹರ್ಷಿ, ಛತ್ರಪತಿ ಶಿವಾಜಿ, ಸಂತ ಕವಿ ಸರ್ವಜ್ಞ ಹಾಗೂ ಕಾಯಕ ಶರಣರ ಜಯಂತಿಯನ್ನು ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು ತಿಳಿಸಿದ್ದಾರೆ.
ಮೇಲ್ಕಂಡ ನಾಲ್ಕು ಜಯಂತಿಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಫೆ. 03) ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಫೆ. 15 ರಂದು ಸಂತ ಸೇವಾಲಾಲ ಜಯಂತಿ; ಫೆ. 19 ರಂದು ಸವಿತಾ ಮಹರ್ಷಿ ಜಯಂತಿ; ಫೆ. 19 ರಂದು ಛತ್ರ ಪತಿ ಶಿವಾಜಿ ಜಯಂತಿ ಹಾಗೂ ಫೆ.20 ರಂದು ಸಂತ ಕವಿ ಸರ್ವಜ್ಞ ಜಯಂತಿಯನ್ನು ಆಚರಿಸಲಾಗುವುದು.
ಸಂತ ಸೇವಾಲಾಲ ಜಯಂತಿಯನ್ನು ಬೆಳಿಗ್ಗೆ 11 ಗಂಟೆಗೆ ಕಲಾಮಂದಿರ ಆವರಣದಲ್ಲಿರುವ ಬಸವರಾಜ ಕಟ್ಟೀಮನಿ ಸಭಾಭವನದಲ್ಲಿ ಆಚರಿಸಲಾಗುವುದು. ಅದೇ ರೀತಿ ಸವಿತಾ ಮಹರ್ಷಿ ಜಯಂತಿಯನ್ನು ಮತ್ತು ಸಂತ ಕವಿ ಸರ್ವಜ್ಞ ಜಯಂತಿಯನ್ನು ಬೆಳಿಗ್ಗೆ 11 ಗಂಟೆಗೆ ಕಲಾಮಂದಿರ ಆವರಣದಲ್ಲಿರುವ ಬಸವರಾಜ ಕಟ್ಟೀಮನಿ ಸಭಾ ಭವನದಲ್ಲಿ ಹಾಗೂ ಛತ್ರಪತಿ ಶಿವಾಜಿ ಜಯಂತಿಯನ್ನು ಬೆಳಿಗ್ಗೆ 9 ಗಂಟೆಗೆ ಶಿವಾಜಿ ಮಹಾರಾಜ ಗಾರ್ಡನ್ ನಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಸೂಚನೆ ನೀಡಿದರು.
ಸಾರ್ವಜನಿಕ ಹಿತದೃಷ್ಟಿಯಿಂದ ಕೋವಿಡ್-19 ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಮಾಸ್ಕ್, ಸ್ಯಾನಿಟೈಸರ್ ಬಳಕೆಯ ಜೊತೆಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಭಾವಚಿತ್ರ ಪೂಜೆ ಸಲ್ಲಿಸುವ ಮೂಲಕ ಸರಳ ರೀತಿಯಲ್ಲಿ ಜಯಂತಿಗಳನ್ನು ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ವಿದ್ಯಾವತಿ ಭಜಂತ್ರಿ, ಹಾಗೂ ಸಮಾಜದ ಮುಖಂಡರಾದ ಅಶೋಕ ಪೂಜಾರಿ, ಮಂಜುನಾಥ ಪಮ್ಮಾರ, ಪುಂಡಲೀಕ ನಾರಾಯಣಪುರ,ಅಂಜನಿ ಪಾಟೀಲ, ಬಿ.ಜಿ ಕುಂಬಾರ, ಅಶೋಕ ಕುಂಬಾರ ಸಭೆಯಲ್ಲಿ ಉಪಸ್ಥಿತರಿದ್ದರು.