ಆಟೋ ಚಾಲಕರು ಬೃಹತ್ ಪ್ರತಿಭಟನೆ

0

ಹುಬ್ಬಳ್ಳಿ: ತೈಲ ಬೆಲೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ದ ನಗರದಲ್ಲಿ ಇಂದು ಆಟೋ ಚಾಲಕರು ಬೃಹತ್  ಪ್ರತಿಭಟನೆ ನಡೆಸಿದರು.

ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸೇರಿದ ಆಟೋ ಚಾಲಕರು, ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಿ ಮೋದಿ ಅವರ ಅಣುಕು ಶವಯಾತ್ರೆ ನಡೆಸಿ ಪ್ರತಿಕೃತಿ ದಹಿಸಿ ಆಕ್ರೋಶ ಹೊರ ಹಾಕಿದರು.

ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೆ ಏರುತ್ತಿದೆ. ಇದರಿಂದ ಆಟೋ ಚಾಲಕರಿಗೆ ಜೀವನ ನಡೆಸುವುದು ಕಷ್ಟಕರವಾಗಿದೆ. ಕೋವಿಡ್ ಹಿನ್ನಲೆಯಲ್ಲಿ ಮೊದಲೇ ಪ್ರಯಾಣಿಕರ ಸಂಖ್ಯೆ ವಿರಳವಾಗಿದೆ. ಇಂತಹದರಲ್ಲಿ ತೈಲ ಬೆಲೆ ದಿನದಿಂದ  ಏರಿಕೆ ಮಡಲಾಗುತ್ತಿದೆ. ಜೀವನ ನಡೆಸುವುದು ದುಸ್ತರವಾಗಿದೆ. ಕೂಡಲೇ ಕೇಂದ್ರ ಸರ್ಕಾರ ತೈಲ ಬೆಲೆ ಇಳಿಸಬೇಕು ಒತ್ತಾಯಿಸಿದರು.

ಬಳಿಕ  ತಹಸೀಲ್ದಾರ್ ಮೂಲಕ  ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.