ಸೋಮವಾರ ಖಾನಾಪುರಕ್ಕೆ ಸಚಿವ ಸುರೇಶಕುಮಾರ

0

ಬೆಂಗಳೂರು – ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ ಸೋಮವಾರ ಬೆಳಗಾವಿ ಜಿಲ್ಲೆಯ ಖಾನಾಪುರಕ್ಕೆ ಆಗಮಿಸಲಿದ್ದಾರೆ.

ಅಂದು ಬೆಳಗ್ಗೆ 6.30ಕ್ಕೆ ದಾವಣಗೆರೆಯಿಂದ ರಸ್ತೆ ಮಾರ್ಗವಾಗಿ ಹೊರಟು 9.30ಕ್ಕೆ ಖಾನಾಪುರಕ್ಕೆ ಆಗಮಿಸುವರು. ನಂತರ ಖಾನಾಪುರ ತಾಲೂಕಿನಲ್ಲಿ ಆಯ್ದ ಸರಕಾರಿ ಶಾಲೆಗಳಿಗೆ ಭೇಟಿ ನೀಡುವರು.

10.30ಕ್ಕೆ ಜಾಂಬೋಟಿಯಲ್ಲಿ ವಿಶ್ವಭಾರತಿ ಸಂಸ್ಥೆಯ ವತಿಯಿಂದ ಪುನರುತ್ಥಾನಗೊಂಡ ಶಾಲಾ ಕಟ್ಟಡವನ್ನು ಸಚಿವರು ಲೋಕಾರ್ಪಣೆಗೊಳಿಸಲಿದ್ದಾರೆ.

12.30ಕ್ಕೆ ಗಡಿ ಭಾಗದ ಶಾಲೆಗಳ ಅಭಿವೃದ್ಧಿ ಕುರಿತಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. 2.30ಕ್ಕೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, 3.30ಕ್ಕೆ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.