ವಿವಿಧ ಪ್ರಕಟಣೆಗಳು

0

ವಿದ್ಯುತ್ ವ್ಯತಯ

ಬೆಳಗಾವಿ : ಹೊಸದಾಗಿ 11 ಕೆ.ವ್ಹಿ ಮಾರ್ಗಗಳ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಫೆ. 07 ರಿಂದ 10ರ ವರೆಗೆ ಪ್ರತಿದಿನ ಬೆಳಿಗ್ಗೆ 11.00 ಘಂಟೆಯಿಂದ ಸಾಯಂಕಾಲ 05.00 ಘಂಟೆಯವರೆಗೆ ಹುವಿಸಕಂನಿ ವತಿಯಿಂದ 110 ಕೆ.ವ್ಹಿ. ಹಿರೇಬಾಗೇವಾಡಿ ಉಪಕೇಂದ್ರದಿಂದ ಸರಬರಾಜು ಆಗುವ ಬೆಳಗಾವಿ

ತಾಲೂಕಿನ ಮುತ್ನಾಳ, ವಿರಕನಕೊಪ್ಪ, ಭೆಂಡಿಗೇರಿ, ಗಜಪತಿ, ಬಡಾಲ ಅಂಕಲಗಿ, ಹುಲಿಕವಿ, ಕೆ. ಕೆ. ಕೊಪ್ಪ, ಹಲಗಿಮರ್ಡಿ, ನಾಗೇನಟ್ಟಿ, ನಾಗೇರಹಾಳ, ಬಡಸ, ನಂದಿಹಳ್ಳಿ ಹಾಗೂ ಕುಕಡೊಳ್ಳಿ ಹಾಗೂ ಖಾನಾಪೂರ ತಾಲೂಕಿನ ಪಾರಿಶ್ವಾಡ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ ಕಾರ್ಯನಿರ್ವಾಹಕ ಇಂಜಿನೀಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ./////

 

“ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ” ಸದಸ್ಯರ ಭೇಟಿ

ಬೆಳಗಾವಿ : “ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ” ಸದಸ್ಯರುಗಳಾದ ಭಾರತಿ ವಾಳ್ವೇಕರ ಹಾಗೂ ಅಶೋಕ ಯರಗಟ್ಟಿ ಅವರು ಫೆ. 9 ರಂದು ಬೆಳಿಗ್ಗೆ 10 ಗಂಟೆಯಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ವಸತಿ ನಿಲಯಗಳಿಗೆ ಭೇಟಿ ನೀಡಲಿದ್ದಾರೆ.
ಫೆ. 10 ರಂದು ಬೆಳಿಗ್ಗೆ 10 ಗಂಟೆಗೆ ಮಾನ್ಯ ಜಿಲ್ಲಾಧಿಕಾರಿಗಳ ಸಭಾಗೃಹದಲ್ಲಿ ಬಾಲನ್ಯಾಯ ಕಾಯ್ದೆ-2015, ಬಾಲ್ಯವಿವಾಹ ನಿಷೇಧ ಕಾಯ್ದೆ, ಶಾಲೆಯಿಂದ ಹೊರಗುಳಿದ ಮಕ್ಕಳ ದಾಖಲಾತಿ, ಆರ್.ಟಿ.ಇ ಕಾಯ್ದೆ-2009, ಪೋಕ್ಸೋ ಕಾಯ್ದೆ-2012 ರ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಇದಾದ ಬಳಿಕ ಮಧ್ಯಾಹ್ನ 2 ರಿಂದ ಪೋಕ್ಸೋ ಕಾಯ್ದೆ ಕುರಿತು ಜಾಗೃತಿ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ///

 

ಅಪರಿಚಿತ ವ್ಯಕ್ತಿಯ ಶವ ಪತ್ತೆ


ಬೆಳಗಾವಿ: ಅಪರಿಚಿತ 40 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದ್ದು ಅನುಮಾನಾಸ್ಪದವಾಗಿ ಮರಣ ಹೊಂದಿರುತ್ತಾನೆ.
ಪ್ರಕರಣವು ಬೆಳಗಾವಿ ರೈಲ್ವೇ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ಮೃತರ ವಾರಸುದಾರರು ಪತ್ತೆಯಾಗಿರುವದಿಲ್ಲ, ಚಹರೆ ಪಟ್ಟಿಯುಳ್ಳ ವ್ಯಕ್ತಿ ಕಾಣೆಯಾದ ಪ್ರಕರಣಕ್ಕೆ ಸಂಬಂದಿಸಿದಂತೆ ಅಥವಾ ವಾರಸುದಾರರು ಯಾರಾದರು ಇದಲ್ಲಿ ಕೂಡಲೇ ಪೆÇಲೀಸ್ ಠಾಣೆ ದೂರವಾಣಿ ಸಂಖ್ಯೆ 0831-2405273 ಅಥವಾ ಪಿ.ಎಸ್.ಐ ರವರ ಮೊಬೈಲ್ ನಂ 9480802127 ಮತ್ತು ಈ ಮೇಲ್   belgaumrly@ksp.gov.in. ಅಥವಾ ಪೆÇಲಿಸ್ ಉಪ ನಿರೀಕ್ಷಕರು ರೈಲ್ವೆ ಪೆÇಲೀಸ್ ಠಾಣೆ ಬೆಳಗಾವಿ ರವರಿಗೆ ತಿಳಿಸಲು ಪ್ರಕಟಣೆಯಲ್ಲಿ ತಿಳಸಿದ್ದಾರೆ./////

 

ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

ಬೆಳಗಾವಿ : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ”, ಮತ್ತು “ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ”, ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು,    www.ssp.postmatric.karnataka.gov.in ವೆಬ್ ಸೈಟಗಳ ಮೂಲಕ ಮಾರ್ಚ 05ರ ಒಳಗಾಗಿ ಅರ್ಜಿ ಅರ್ಜಿ ಸಲ್ಲಿಸಬಹುದು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಅದೇಶಗಳ ಬಗ್ಗೆ ಮಾಹಿತಿಯನ್ನು    www.bcwd.karnataka.gov.in ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8050770005/ 8050770004 ಇಮೇಲ್ bಛಿತಿಜ.sಛಿhoಟಚಿಡಿshiಠಿ@ಞಚಿಡಿಟಿಚಿಣಚಿಞಚಿ.gov.iಟಿ ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂಖ್ಯೆ: 080-35254757 ಇಮೇಲ್:    bcwd.scholarship@karnataka.gov.in ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///./

ಉಚಿತ ಕೌಶಲ್ಯ ತರಬೇತಿಗಳಿಗೆ ಅರ್ಜಿ ಆಹ್ವಾನ

ಬೆಳಗಾವಿ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ 18 ರಿಂದ 45 ವಯಸ್ಸಿನ ನಿರುದ್ಯೋಗಿ ಯುವಕರಿಗಾಗಿ 30 ದಿನಗಳ ಉಚಿತ ಜೆಸಿಬಿ ಆಪರೇಟರ್ ಟ್ರೈನಿಂಗ್ ತರಬೇತಿಯನ್ನು ನೀಡಲಾಗುವುದು.
ಅಭ್ಯರ್ಥಿಗಳು ಫೆ.10ರ ಒಳಗೆ ಹೆಸರು ನೊಂದಾಯಿಸಬೇಕು. ಈ ತರಬೇತಿಯು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿದೆ. ಈ ತರಬೇತಿಯು ಊಟ ವಸತಿಯೊಂದಿಗೆ ಉಚಿತವಾಗಿರುತ್ತದೆ . ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ.
ತರಬೇತಿಯಲ್ಲಿ ಸಾಥ್ ಸೀಲ್ಸ್ , ಯೋಗ ತರಬೇತಿ ಹಾಗೂ ಬ್ಯಾಂಕಿಂಗ್ , ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಬಗೆಗಿನ ಮಾಹಿತಿಯನ್ನೂ ಉಚಿತವಾಗಿ ನೀಡಲಾಗುವುದು . ತರಬೇತಿಯಲ್ಲಿ ಭಾಗವಹಿಸಲು ಆಸಕ್ತರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ , ಹಳಿಯಾಳ , ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಂಪರ್ಕಿಸಲು ಕೋರಲಾಗಿದೆ . ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ 9449782425 , 9483485489 , 9482188780 , 08284-220807 . 0823ಒ 295307 ಅನ್ನು ಸಂಪರ್ಕಿಸಲು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

 

ರಾಮದುರ್ಗ ತಾಲೂಕಾ 8ನೇ ಕನ್ನಡ ಸಾಹಿತ್ಯ ಸಮ್ಮೇಳನ ಫೆಬ್ರುವರಿ 9ರಂದು

ಬೆಳಗಾವಿ : ರಾಮದುರ್ಗ ತಾಲೂಕಾ 8ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮಂಗಳವಾರ ಫೆ. 9ರಂದು ಮುಂಜಾನೆ 8 ಗೆಂಟೆಗೆ ಶ್ರೀ ರಾಮೇಶ್ವರ ಸಭಾ ಭವನ ಹುಲಕುಂದ ಗ್ರಾಮದಲ್ಲಿ ಜರುಗಲಿದೆ.
ಹುಲಕುಂದ ಗ್ರಾಮದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನ ಮುಂಜಾನೆ 8:30ಕ್ಕೆ ಶ್ರೀ ರಾಮೇಶ್ವರ ಶಿಕ್ಷಣ ಸಂಸ್ಥೆ ಹುಲಕುಂದ ಆಡಳಿತಾಧಿಕಾರಿಗಳು ಸಿ. ಬಿ. ಹಿರೇಮಠ ಅವರು ಭುವನೇಶ್ವರಿ ದೇವಿ ಭಾವಚಿತ್ರದ ಪೂಜೆ ನೆರವೇರಿಸುವರು. ಮ.ಘ.ಚ.ಶ್ರೀ.ಅದೃಶ್ಯ ಪವಾಡೇಶ್ವರ ಮಹಾಸ್ವಾಮಿಗಳು ಮರಡಿಮಠ ಗೋಕಾಕ ಮತ್ತು ಶ.ಬ್ರ.ಅಭಿನವ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಬ್ರಹ್ಮನ್ಮಠ ಚಿಪ್ಪಲಕಟ್ಟಿ-ಸಾಲಹಳ್ಳಿ ದಿವ್ಯ ಸಾನಿಧ್ಯದಲ್ಲಿ ನಡೆಯಲಿದ್ದು, ಮಾನ್ಯ ಶಾಸಕರಾದ ಮಹಾದೇವಪ್ಪ ಯಾದವಾಡ ಅವರು ಸಮ್ಮೇಳನ ಉದ್ಘಾಟನೆಯನ್ನು ಮಾಡಲಿದ್ದಾರೆ.
ಸಾಹಿತಿಗಳಾದ ಡಾ. ರಾಜೇಂದ್ರ ಅಣ್ಣಾನವರ ಅವರು ಸಮ್ಮೇಳನಾಧ್ಯಕ್ಷತೆಯನ್ನು ವಹಿಸಲಿದ್ದು, ನಿವೃತ್ತ ಉಪ ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ ಜಿ. ಬಿ. ಗೌಡಪ್ಪಗೋಳ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ಕ.ಸಾ.ಪ. ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀಮತಿ ಮಂಗಲಾ ಮೆಟಗುಡ್ಡ ಅವರು ಆಶಯ ನುಡಿ ಮಂಡಿಸುವರು. ಶ್ರೀಮತಿ ಶಕುಂತಲಾ ವಡ್ಡರ, ರಮೇಶ ದೇಶಪಾಂಡೆ, ರೇಣಪ್ಪ ಸೋಮಗೊಂಡ, ಕೃಷ್ಣಪ್ಪ ಲಮಾಣಿ, ಶ್ರೀಮತಿ ಶಿವಕ್ಕ ಬೆಳವಡಿ, ಮಾರುತಿ ತುಪ್ಪದ, ಜಹೂರ ಹಾಜಿ, ಶ್ರೀಮತಿ ಲಕ್ಷ್ಮವ್ವ ವಾರಿಮನಿ, ಹನುಮಂತ ವಗ್ಗನ್ನವರ ಅತಿಥಿಗಳಾಗಿ ಆಗಮಿಸುವರು.
ಸಮ್ಮೇಳನದಲ್ಲಿ ಗ್ರಂಥ ಲೋಕಾರ್ಪಣೆ, ವೈಚಾರಿಕ ಗೋಷ್ಠಿ, ಕವಿಗೋಷ್ಠಿ, ಸಂಸ್ಕøತಿ ಸೌರಭ, ಸಮಾರೋಪ ಸಮಾರಂಭ ನಡೆಯಲಿದ್ದು, ಕ.ಸಾ.ಪ ಎಲ್ಲ ತಾಲೂಕಾ ಅಧ್ಯಕ್ಷರುಗಳು ಉಪಸ್ಥಿತರಿರುವರು. ಈ ಕಾರ್ಯಕ್ರಮಕ್ಕೆ ಸಮಸ್ತ ಕನ್ನಡಾಭಿಮಾನಿಗಳು ಆಗಮಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ಜಿಲ್ಲಾಧ್ಯಕ್ಷರಾದ ಮಂಗಲಾ ಮೆಟಗುಡ್ಡ ಮತ್ತು ರಾಮದುರ್ಗ ತಾಲೂಕಾ ಅಧ್ಯಕ್ಷರಾದ ಪಾಂಡುರಂಗ ಜಟಗನ್ನವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ./////