ವಾಲ್ಮೀಕಿ ಪ್ರಸನ್ನಾನಂದರಿಗೆ ಬೆಳಗಾವಿ ಹುಕ್ಕೇರಿ ಹಿರೇಮಠದ ಗೌರವ

0

ವಾಲ್ಮೀಕಿ ಪ್ರಸನ್ನಾನಂದರಿಗೆ ಬೆಳಗಾವಿ ಹುಕ್ಕೇರಿ ಹಿರೇಮಠದ ಗೌರವ

 

ಹರಿಹರ ತಾಲೂಕಿನ ರಾಜನಹಳ್ಳಿ ಶ್ರೀಜಗದ್ಗುರು ವಾಲ್ಮೀಕಿ ಗುರುಪೀಠ ದಲ್ಲಿ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಅವರು ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳವರಿಗೆ ಬೆಳಗಾವಿ ಹುಕ್ಕೇರಿ ಹಿರೇಮಠದ ಗೌರವವನ್ನು ನೀಡಿ ಸನ್ಮಾನಿಸಿದರು ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯ ಅಧ್ಯಕ್ಷರಾದ ಹಾಗೂ ಶಾಸಕರು ಸತೀಶ್ ಜಾರಕಿಹೊಳಿ ಅವರು ಅವರು ಮಾತನಾಡುತ್ತಾ ಬೆಳಗಾವಿ ಹುಕ್ಕೇರಿ ಹಿರೇಮಠ ಎಲ್ಲಾ ಸಮುದಾಯದೊಂದಿಗೆ ಬೆರೆತು ಕಾರ್ಯವನ್ನು ಮಾಡುತ್ತಿದೆ ಎಂದು ವಾಲ್ಮೀಕಿ ಪೀಠದ ಗುರುಗಳಿಗೆ ಗೌರವಿಸಿದ್ದು ನನಗೆ ಅತೀವ ಸಂತೋಷ ತಂದಿದೆ ಎಂದರು

ಯುವಸೇನೆಯ ರಾಜ್ಯಾಧ್ಯಕ್ಷ ಶ್ರೀನಿವಾಸ್ ನಾಯಕ್ ಅವರು ಈ ಸಂದರ್ಭದಲ್ಲಿ ಭಾಗಿಯಾಗಿದ್ದರು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ವಾಲ್ಮೀಕಿ ಸಮುದಾಯ ಇಡೀ ದೇಶದಲ್ಲಿ ತನ್ನ ಕಾರ್ಯವನ್ನು ಸೇವೆಯನ್ನು ಮಾಡುತ್ತಾ ಬಂದಿದೆ ಪ್ರತಿಯೊಂದು ಊರಿನಲ್ಲಿಯೂ ಕೂಡ ವಾಲ್ಮೀಕಿ ಸಮಾಜ ಇದೆ ರಾಜರು ಮದಕರಿ ನಾಯಕರು

ರಾಜ್ಯವನ್ನು ಆಳಿದ್ದರು ಹಾಗೆಯೇ ವಾಲ್ಮೀಕಿ ಸಮುದಾಯವನ್ನು ರಕ್ಷಣೆ ಮಾಡುತ್ತದೆ ಇವರಿಗೆ ಇನ್ನೂ ಹೆಚ್ಚಿನ ಶಿಕ್ಷಣ ಆರ್ಥಿಕ ನೆರವನ್ನು ಸರಕಾರ ನೀಡಲಿ ಎಂದರು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅವರು ಹುಕ್ಕೇರಿ ಹಿರೇಮಠದ ಬಗ್ಗೆ ಅಪಾರವಾದ ಗೌರವವನ್ನು ವ್ಯಕ್ತಪಡಿಸಿದರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಅವರು

ನಮ್ಮ ಬೆಳಗಾವಿ ಜಿಲ್ಲಾ ಸಮುದಾಯದೊಂದಿಗೆ ನಮ್ಮ ಸಮುದಾಯದ ಸ್ವಾಮೀಜಿಯವರಿಗೆ ಗೌರವಿಸಿದ್ದು ನನಗೆ ಅತೀವ ಸಂತಸ ತಂದಿದೆ ಎಂದರು ಬೇಬಿ ಗ್ರಾಮದ ಶ್ರೀ ಮ ನೀ ಪ್ರ ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮಿಗಳು ಉಪಸ್ಥಿತರಿದ್ದರು