ವಿಕಲಚೇತನರಿಗೆ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ತರಬೇತಿ ನೀಡಲು ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

0

ವಿಕಲಚೇತನರಿಗೆ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ತರಬೇತಿ ನೀಡಲು ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾ

ಬೆಳಗಾವಿ ಫೆ.11 : ರಾಜ್ಯ ಸರ್ಕಾರಿ ನೌಕರರು, ನಿಗಮ ಮಂಡಳಿ ಪ್ರಾಧಿಕಾರ ವಿಶ್ವವಿದ್ಯಾಲಯ ಸಂಸ್ಥೆಯ ಅಧಿಕಾರಿ/ ನೌಕರರು ತಪ್ಪು ಮಾಹಿತಿ ನೀಡಿ ಬಿ.ಪಿ.ಎಲ್ ಪಡಿತರ ಚೀಟಿಯನ್ನು ಪಡೆದಿದ್ದಲ್ಲಿ ಅದನ್ನು ಸ್ವಯಂ ಪ್ರೇರಣೆಯಿಂದ ಆಹಾರ ಇಲಾಖೆಗೆ ಅಧ್ಯರ್ಪಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಹಾರ, ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಉಮೇಶ ಕತ್ತಿ ಅವರು ರಾಜ್ಯದಲ್ಲಿ ರಾಜ್ಯ ಸರ್ಕಾರಿ ನೌಕರರು, ನಿಗಮ ಮಂಡಳಿ ಪ್ರಾಧಿಕಾರ ವಿಶ್ವವಿದ್ಯಾಲಯ ಸಂಸ್ಥೆಯ ಅಧಿಕಾರಿ/ ನೌಕರರು ಮತ್ತು ಕಾರ್ಖಾನೆಯ ನೌಕರರು ಇಲಾಖೆಗೆ ತಪ್ಪು ಮಾಹಿತಿ ನೀಡಿ ಆಧ್ಯತಾ(ಬಿ.ಪಿ.ಎಲ್) ಚೀಟಿಯನ್ನು ಪಡೆದಿರುವುದು ಗಮನಕ್ಕೆ ಬಂದಿದ್ದು, ಅಂತಹವರು ಸ್ವಯಂ ಪ್ರೇರಣೆಯಿಂದ ಫೆ. 20ರೊಳಗಾಗಿ ಸಂಬಂಧಪಟ್ಟ ಆಹಾರ ಇಲಾಖೆಯ ಕಾರ್ಯಾಲಯಕ್ಕೆ ಅಧ್ಯರ್ಪಿಸಿದ್ದರೆ ಯಾವುದೇ ರೀತಿಯ ಕ್ರಮವನ್ನು ವಹಿಸಲಾಗುವುದಿಲ್ಲ.
ತದನಂತರ ಹೆಚ್.ಆರ್.ಎಮ್.ಎಸ್ ತಂತ್ರಾಂಶದಿಂದ ಮಾಹಿತಿ ಪಡೆದು ಶೋಧ ನಡೆಸಿ ಪತ್ತೆ ಹಚ್ಚಿದ್ದಲ್ಲಿ ಅಂತಹ ನೌಕರರ ಮೇಲೆ Illegal Possession On Unauthorized Ration 1977 ರಡಿ ಕಾನೂನು ಪ್ರಕಾರ ಕ್ರಮ ವಹಿಸಿ ಪಡಿತರ ಚೀಟಿ ಪಡೆದ ದಿನಾಂಕದಿಂದ ಇಲ್ಲಿಯವರೆಗೆ ದಂಡವನ್ನು ವಸೂಲಿ ಮಾಡಲಾಗುವುದು ಹಾಗೂ ಅಂತಹ ನೌಕರರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ನಿಯಮಾನುಸಾರವಾಗಿ ಕಾನೂನು ಕ್ರಮವನ್ನು ವಹಿಸಲಾಗುವುವದು ಎಂದು ಸಚಿವರು ಉಲ್ಲೇಖದ ಸಭೆಗಳಲ್ಲಿ ಸ್ಪಷ್ಟ ನಿರ್ದೇಶನಗಳನ್ನು ನೀಡಿರುತ್ತಾರೆ. ಇದರಂತೆ ಜಿಲ್ಲೆಯಲ್ಲಿರುವ ಎಲ್ಲಾ ನೌಕರರು ಕೂಡಲೇ ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.////

ಫೆ.13 ರಂದು ಉದ್ಯೋಗ ಮೇಳ

ಬೆಳಗಾವಿ ಫೆ.11 : “ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ” (ಓಅS) ಅಡಿಯಲ್ಲಿ ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಫೆ.13 ರಂದು ಬೆಳಿಗ್ಗೆ 10.30 ರಿಂದ ಸಾಯಂಕಾಲ 3.30 ಗಂಟೆಗಳವರೆಗೆ ನೆಹರೂ ನಗರದ ರಾಮ್‍ದೇವ್ ಹೊಟೇಲ್ ಹಿಂದುಗಡೆ ‘ಪೀಪಲ್ ಟ್ರೀ ಎಜ್ಯುಕೇಷನ್ ಸೊಸೈಟಿಯ ಕಾಲೇಜ್ ಆಫ್ ಬಿ.ಬಿ.ಎ., ಬಿ.ಸಿ.ಎ. ಮತ್ತು ಬಿ.ಕಾಂ.’ ಕಾಲೇಜಿನಲ್ಲಿ “ಉದ್ಯೋಗ ಮೇಳ” ವನ್ನು ಹಮ್ಮಿಕೊಳ್ಳಲಾಗಿದೆ.
ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ (ಮೆಕ್ಯಾನಿಕಲ್), ಬಿ.ಇ. (ಮೆಕ್ಯಾನಿಕಲ್ & ಸಿ.ಎಸ್.), ಹೋಟೆಲ್ ಮ್ಯಾನೇಜ್‍ಮೆಂಟ್ ಪದವಿ, ಎಂ.ಸಿ.ಎ. ಹಾಗೂ ಇನ್ನಿತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸದರಿ ಉದ್ಯೋಗಮೇಳದಲ್ಲಿ ವಿಕಲಚೇತನರಿಗೂ ಅವಕಾಶವಿದೆ. ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ.
ಆಸಕ್ತರು  https://www.sites.google.com/view/ncsjobfairF ವೆಬ್‍ಸೈಟ್‍ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಉದ್ಯೋಗಮೇಳ ನಡೆಯುವ ಸ್ಥಳದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು.
ಸದರಿ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಳಿಗಾಗಿ ಮೊಬೈಲ್ ಸಂಖ್ಯೆ: 8762767205 / 9743166374 ಸಂಪರ್ಕಿಸಿ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////

 

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಬೆಳಗಾವಿ ಫೆ.11 : ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಕ್ ನಂತರ ಬಾಲಕ ಮತ್ತು ಬಾಲಕೀಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2020-21ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.www.bcwd.karnataka.gov.in
ನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬೇಕು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ಫೆ.14 ವರೆಗೆ ವಿಸ್ತರಿಸಲಾಗಿದೆ.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್  www.bcwd.karnataka.gov.in ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ    bcwd.hostels@karnataka.gov.in ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ಸಹಾಯವಾಣಿ ಸಂಖ್ಯೆ:080-8050370006 ಗೆ ಸಂಪರ್ಕಿಸಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////

ಕರ್ನಾಟಕ ಜೀವವೈವಿಧ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಫೆ.12ರಂದು ಜಿಲ್ಲಾ ಪ್ರವಾಸ

ಬೆಳಗಾವಿ ಫೆ.11 : ಕರ್ನಾಟಕ ಜೀವ ವೈವಿಧ್ಯ ಮಂಡಳಿಯ (ರಾಜ್ಯ ಸಚಿವರ ಸ್ಥಾನ) ಅಧ್ಯಕ್ಷರಾದ ಅನಂತ ಹೆಗಡೆ ಅಶೀಸರ ಅವರು ಶುಕ್ರವಾರ (ಫೆ.12) ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಶುಕ್ರವಾರ (ಫೆ.12) ಬೆಳಿಗ್ಗೆ 6:30ಕ್ಕೆ (ಬೆಂಗಳೂರು-ಬೆಳಗಾವಿ ಎಕ್ಸ್‍ಪ್ರೆಸ್ ರೈಲಿನ ಮೂಲಕ) ಬೆಳಗಾವಿ ರೈಲು ನಿಲ್ದಾಣ ತಲುಪಲಿದ್ದು, ಅರಣ್ಯ ವಿಶ್ರಾಂತಿ ಗೃಹದಲ್ಲಿ ತಂಗಲಿದ್ದಾರೆ.
ಬೆಳಿಗ್ಗೆ 10 ರಿಂದ 11 ಘಂಟೆಯವರೆಗೆ ಸಿ.ಸಿ.ಎಫ್ ಅವರ ಕಛೇರಿಯಲ್ಲಿ ಸಿ.ಸಿ.ಎಫ್, ಡಿ.ಸಿ.ಎಫ್ ಟೆರಿಟೋರಿಯಲ್, ಬೆಳಗಾವಿ ಮತ್ತು ಗೋಕಾಕ್ ಡಿ.ಸಿ.ಎಫ್ ವನ್ಯಜೀವಿ, ಡಿ.ಸಿ.ಎಫ್ ಸಾಮಾಜಿಕ ಅರಣ್ಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ.
ಬಳಿಕ 11 ಘಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಡಿ.ಸಿ, ಸಿ.ಇ.ಒ., ಡಿ.ಸಿ.ಎಫ್ ಟೆರಿಟೋರಿಯಲ್, ಡಿ.ಸಿ.ಎಫ್ ಸಾಮಾಜಿಕ ಅರಣ್ಯ, ಜಿಲ್ಲಾ ತೋಟಗಾರಿಕಾಧಿಕಾರಿಗಳು, ಜಿಲ್ಲಾ ಕೃಷಿ ಅಧಿಕಾರಿಗಳು, ಜಿಲ್ಲಾ ಮಾಲಿನ್ಯ ನಿಯಂತ್ರಣಾಧಿಕಾರಿಗಳು, ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು, ನಗರ ಕೋಶ ಮುಖ್ಯಸ್ಥರ ಜೊತೆಗೆ ಅರಣ್ಯ ಪರಿಸರ ಜೀವ ವೈವಿಧ್ಯ ಅಭಿವೃದ್ಧಿ ವಿಷಯ ಕುರಿತು ಸಮಾಲೋಚನೆ ನಡೆಸಲಿದ್ದಾರೆ ಹಾಗೂ ಮಧ್ಯಾಹ್ನ 12:15ಕ್ಕೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಯೇ ಪತ್ರರ್ಕರಿಗೆ ಮಾಹಿತಿ ನೀಡಲಿದ್ದಾರೆ.
ಮಧ್ಯಾಹ್ನ 12:45ಕ್ಕೆ ಬೆಳಗಾವಿ ಮಹಾನಗರ ಪಾಲಿಕೆ ಜೀವ ವೈವಿಧ್ಯ ಸಮಿತಿ ಅಧ್ಯಕ್ಷರು, ಸದಸ್ಯರುಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಈ ಸಮಾಲೋಚನೆಯಲ್ಲಿ ಸ್ಮಾರ್ಟ್ ಸಿಟಿ ಅಧಿಕಾರಿಗಳು ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 3 ಘಂಟೆಗೆ ಕೆ.ಎಲ್.ಇ. ವಿಶ್ವವಿದ್ಯಾಲಯದ ಕುಲಪತಿಗಳು, ರಿಜಿಸ್ಟ್ರಾರ್, ಸೈನ್ಸ್ ಡೀನ್, ಸಸ್ಯಶಾಸ್ತ್ರಜ್ಞರು, ಪ್ರಾಣಿಶಾಸ್ತ್ರಜ್ಞರು, ಅಧ್ಯಯನಕಾರರ(ರಿಸರ್ಚ್ ಸ್ಕಾಲರ್) ಜೊತೆಗೆ ಪರಿಸರ ಅರಣ್ಯ ಜೀವ ವೈವಿಧ್ಯ ಕುರಿತು ಅಧ್ಯಯನ ಹಾಗೂ ಕಾರ್ಯಚಟುವಟಿಕೆ ಕುರಿತು ಸಂವಾದ ನಡೆಸಲಿದ್ದಾರೆ. ಈ ಸಂವಾದಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್,   Environmemnt Engineering Department ಪ್ರಾಧ್ಯಾಪಕರರು, ಸಂಶೋಧನಾ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಮತ್ತು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್, ಸಸ್ಯಶಾಸ್ತ್ರಜ್ಞರು, ಪ್ರಾಣಿಶಾಸ್ತ್ರಜ್ಞರು, ಜರ್ನಲಿಸಂ, ಎನ್.ಎಸ್.ಎಸ್. ವಿಭಾಗದ ಪ್ರಾಧ್ಯಾಪಕರರು, ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.////