ಖರ್ಗೆ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಅಭಿನಂದನೆ

0

ಬೆಳಗಾವಿ: ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ ನೇಮಕಗೊಂಡ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

“ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವುದು ಸಂತಸ ತಂದಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿರುವ ಅವರು, ರಾಜ್ಯಸಭೆಯಲ್ಲೂ ಅತ್ಯುತ್ತಮವಾಗಿ ನಿರ್ವಹಿಸಲಿದ್ದಾರೆ” ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿ ರಾಜ್ಯದ ವಿವಿಧ ಕಾಂಗ್ರೆಸ್ ಮುಖಂಡರು ಕೂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.