ಭೀಕರ ಅಪಘಾತ: 14 ಪ್ರಯಾಣಿಕರು ಸಾವು

0

ಕರ್ನೂಲು(ಆಂಧ್ರ ಪ್ರದೇಶ), ಫೆ. 14- ಬಸ್ಸು ಮತ್ತು ಟ್ರಕ್ ಮಧ್ಯೆ ಢಿಕ್ಕಿ ಸಂಭವಿಸಿ 14 ಜನರು ಮೃತಪಟ್ಟು ನಾಲ್ವರು ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯ ಮಾದಾರ್ಪುರ ಗ್ರಾಮದಲ್ಲಿ ಭಾನುವಾರ ನಸುಕಿನ ಜಾವ ನಡೆದಿದೆ…

ಗಾಯಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಚಿತ್ತೂರು ಜಿಲ್ಲೆಯ ಮದನಪಲ್ಲೆಯಿಂದ ಅಜ್ಮೀರ್ ದರ್ಗಾಕ್ಕೆ 18 ಜನರು ಮಿನಿ ಬಸ್ಸಿನಲ್ಲಿ ಯಾತ್ರೆ ಹೊರಟಿದ್ದರು. ನಿಯಂತ್ರಣ ಕಳೆದುಕೊಂಡ ಬಸ್ಸು ರಸ್ತೆಯ ವಿಭಜಕಕ್ಕೆ ಢಿಕ್ಕಿ ಹೊಡೆದು ಮತ್ತೊಂದು ಬದಿಗೆ ಬಿದ್ದು ಎದು ರಿನಿಂದ ಬರುತ್ತಿದ್ದ ಟ್ರಕ್ ಗೆ ಢಿಕ್ಕಿ ಹೊಡೆಯಿತು.

ಅಪಘಾತದ ತೀವ್ರತೆ ಗೆ ಬಸ್ಸು ಸಂಪೂರ್ಣ ಜಖಂ ಆಗಿದ್ದು ಬಸ್ಸಿನಲ್ಲಿದ್ದ 18 ಜನರ ಪೈಕಿ 14 ಜನರು ಸ್ಥಳದಲ್ಲಿಯೇ ಮೃತಪಟ್ಟರು.ಪೊಲೀಸರಿಗೆ ಮಾಹಿತಿ ಸಿಕ್ಕಿದ ತಕ್ಷಣ ಸ್ಥಳಕ್ಕೆ 108 ತುರ್ತು ವಾಹನದೊಂದಿಗೆ ಆಗಮಿಸಿದರು. ಗಾಯಗೊಂಡವರನ್ನು ಕರ್ನೂಲು ಸರ್ಕಾರಿ ಆಸ್ಪತ್ರೆಗೆ ದಾಖ ಲಿಸಲಾಗಿದೆ. ಪ್ರಾಥಮಿಕ ತನಿಖೆಯಿಂದ, ಮಿನಿಬಸ್ಸು ವೇಗವಾಗಿದ್ದು ಚಾಲಕನಿಗೆ ಗಾಡಿ ಓಡಿಸುವಾಗ ನಿದ್ದೆಯ ಮಂಪರು ಬಂದು ವಿಭಜಕಕ್ಕೆ ಢಿಕ್ಕಿ ಹೊಡೆದಿರಬೇಕು ಎಂದು ಹೇಳಲಾಗುತ್ತಿದೆ.

ಕರ್ನೂಲು ಜಿಲ್ಲಾಧಿಕಾರಿ ಜಿ ವೀರಪಂಡಿಯನ್ ಮತ್ತು ಎಸ್ಪಿ ಫಕೀರಪ್ಪ ಅಪಘಾತ ಸಂಭವಿಸಿದ ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿ ಅವಲೋಕಿಸಿ ದರು.ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಮುಖ್ಯಮಂತ್ರಿ ಆಘಾತ:

ಅಪಘಾತ ವಿಷಯ ಕೇಳಿದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಗಾಯ ಗೊಂಡವರಿಗೆ ಉತ್ತಮ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಆಂಧ್ರಪ್ರದೇಶ ರಾಜ್ಯಪಾಲ ಬಿಸ್ವ ಭೂಷಣ್ ಹರಿಚಂದನ್ ಸಹ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.