ಲೋಕಸಭಾ ಟಿಕೆಟ್ ಸುರೇಶ್ ಅಂಗಡಿ ಕುಟುಂಬಕ್ಕೆ ನೀಡಲು ಮನವಿ ಮಾಡಿದ್ದೇನೆ ಸಚಿವ ರಮೇಶ್ ಜಾರಕಿಹೊಳಿ

0

ಬೆಳಗಾವಿ: ಮತ್ತೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್​ ಮೈಂಡ್ ಔಟ್ ಆಗಿದೆ ಅವರನ್ನು ಇನ್ನೂ ಮುಂದೆ ಬಸ್ ಸ್ಟಾಂಡ್​ನಲ್ಲಿ ಹುಡುಕಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ.

ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದಗಳೊಟ್ಟಿಗೆ ಮಾತನಾಡಿದ ಅವರು, ಲಕ್ಷ್ಮೀ ಹೆಬ್ಬಾಳಕರ ಬಗ್ಗೆ ಮಾತಾಡೋದು ಬೇಡ. ಅವರು​ ಗೋಕಾಕ್​ ಮತ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ಸ್ವಾಗತಿಸುತ್ತೇನೆ. ಅವರಿಗೆ ಮೈಂಡ್ ಔಟ ಆಗಿದೆ ಅವರಿಗೆ ಹೆಚ್ಚು ಮಹತ್ವ ನೀಡೋದು ಬೇಡ ಎಂದರು.

ಐದು ಜನ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈಗಲೇ ಅವರ ಹೆಸರು ಬಹಿರಂಗಪಡಿಸುವುದಿಲ್ಲ ಎಂದಿದ್ದಾರೆ.

ಮೀಸಲಾತಿ ಹೋರಾಟದಲ್ಲಿ ಸಚಿವರ ಭಾಗಿ ವಿಷಯದ ಬಗ್ಗೆ ಮಾತನಾಡಿದ ಅವರು, ಈ ಬಗ್ಗೆ ಪಕ್ಷದ ವರಿಷ್ಠ ಅರುಣ್​ ಕುಮಾರ್​ ಬಂದು ಚರ್ಚೆ ಮಾಡಲಿದ್ದಾರೆ. ಬೆಳಗಾವಿ ಲೋಕಸಭಾ ಟಿಕೆಟ್ ಸುರೇಶ್ ಅಂಗಡಿ ಕುಟುಂಬಕ್ಕೆ ನೀಡಲು ಮನವಿ ಮಾಡಿದ್ದೇನೆ. ಹೈಕಮಾಂಡ್ ಯಾರಿಗೂ ಟಿಕೆಟ್ ನೀಡಿದರೂ ಬೆಂಬಲಿಸುತ್ತೇನೆ ಎಂದು ಹೇಳಿದರು.