ಭೀಕರ ಅಪಘಾತ: ನಾಲ್ವರು ದುರ್ಮರಣ

0

ಹಾಸನ, ಫೆ. 21- ಟಾಟಾ ಸುಮೋಗೆ ಹಿಂದಿನಿಂದ ಕ್ವಾಲೀಸ್ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಹೊರವಲಯ ಕೆಂಚಟ್ಟಹಳ್ಳಿ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.

ಮೃತರನ್ನು ಕೆಜಿಎಫ್ ಮೂಲದ ಪ್ರದೀಪ್ ಕುಮಾರ್, ಚಂದ್ರಶೇಖರ್, ನವೀನ್ ಕುಮಾರ್, ಸುನೀಲ್ ಕುಮಾರ್ ಎಂದು ಗುರುತಿಸಲಾಗಿದೆ.

14 ಜನರು ಗಾಯಗೊಂಡಿದ್ದಾರೆ… ಶಾಂತಿಗ್ರಾಮದ ಹತ್ತಿರ ಕೆಂಚಟ್ಟಹಳ್ಳಿ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿ ಯಲ್ಲಿ ಬೆಳಗಿನ ಜಾವ ಸುಮಾರು 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಕ್ವಾಲೀಸ್‌ ಕಾರ್‌ ನಲ್ಲಿದ್ದ 4 ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದೆ…

ನಾಲ್ವರು ಮಹಿಳೆಯರು, ಮೂವರು ಮಕ್ಕಳು ಸೇರಿ 13 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಹಂಪ್ ಇದ್ದ ಕಾರಣ ಟಾಟಾ ಸುಮೋ‌‌ ನಿಧಾನ ಮಾಡಿದಾಗ ಹಿಂಬದಿಯಿಂದ ಕ್ವಾಲಿಸ್ ವಾಹನ ಡಿಕ್ಕಿ ಹೊಡೆದಿದೆ.

ಕ್ವಾಲಿಸ್ ವಾಹನದಲ್ಲಿ ಎಂಟು ಮಂದಿ ಕೆಜಿಎಫ್‌ನಿಂದ‌ ಉಡುಪಿಗೆ ಮದುವೆಗೆ ತೆರಳುತ್ತಿದ್ದರು. ಟಾಟಾ ಸುಮೋದಲ್ಲಿ ಹತ್ತು ಜನರು ಕೋಲಾರದ ಮುಳಬಾಗಿಲಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಗಾಯಾಳುಗಳಿಗೆ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.