ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್

0

ನವದೆಹಲಿ: ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ರಿಲೀಫ್ ಸಿಕ್ಕಿದೆ. ಪ್ರಕರಣದ ವಿಚಾರಣೆಗೆ ಸುಪ್ರೀಮ್ ಕೋರ್ಟ್ ತಡೆಯಾಜ್ಞೆ ನೀಡಿದೆ.

ಬೆಂಗಳೂರಿನ ಬೆಳ್ಳಂದೂರು ಬಳಿಯ ಭೂಮಿಯನ್ನು ಸಿಎಂ ಯಡಿಯೂರಪ್ಪ ಅಕ್ರಮವಾಗಿ ಡಿನೋಟೀಫಿಕೇಷನ್ ಮಾಡಿದ್ದಾರೆಂದು 2011ರಲ್ಲಿ ಆಲಂ ಪಾಷಾ ದೂರು ನೀಡಿದ್ದರು. ಸಿಎಂ ಯಡಿಯೂರಪ್ಪ ವಿರುದ್ಧ ತನಿಖೆ ನಡೆಸಬೇಕು ಎಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ಲೋಕಾಯುಕ್ತ ಕೋರ್ಟ್ ನ ಮೇಲ್ವಿಚಾರಣೆಯಲ್ಲಿ ಪ್ರಕರಣದ ತನಿಖೆ ನಡೆಸಲು ಹೈಕೋರ್ಟ್ ಆದೇಶ ನೀಡಿತ್ತು.

ಇದನ್ನು ಪ್ರಶ್ನಿಸಿ ಸಿಎಂ ಯಡಿಯೂರಪ್ಪ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಇದೀಗ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಹಾಗಾಗಿ ಸಿಎಂ ಯಡಿಯೂರಪ್ಪ ನವರಿಗೆ ರಿಲೀಫ್ ಸಿಕ್ಕಂತಾಗಿದೆ.