ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಮಹತ್ವವಿದೆ : ಸತೀಶ್ ಜಾರಕಿಹೊಳಿ

0

ಗೋಕಾಕ : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಬಹಳಷ್ಟು ಮಹತ್ವ ಇದೆ. ಮತದಾನ ಮಾಡಿದವರೆಲ್ಲರಿಗೂ ಅಭಿನಂಧನೆ ಸಲ್ಲಿಸುತ್ತೇನೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ  ಹೇಳಿದರು.

ಇಲ್ಲಿನ ಹಿಲ್ ಗಾರ್ಡನ್ ನಿವಾಸದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿ, ಶನಿವಾರ ನಡೆದಂತ ಮತದಾನದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸುಮಾರು 10 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಪ್ರಥಮವಾಗಿ ಮತದಾನ ಮಾಡಿದವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಕಾಂಗ್ರೆಸ್ ಕಾರ್ಯಕರ್ತರು, ನಾವು ಸಹ ಜನರ ಮೇಲೆ ವಿಶ್ವಾಸ ಹೊಂದಿದ್ಧೇವೆ, ಈ ಬಾರಿ ಬೆಳಗಾವಿ ಲೋಕಸಭಾ ಕ್ಷೇತ್ರದ ಜನರು ಬದಲಾವಣೆ ಮಾಡಲಿದ್ದಾರೆ ಎಂದು. ಆದರೆ ಮೇ.2ರವರೆಗೂ ಸಹ ಕಾಯಬೇಕಾಗಿದೆ ಎನ್ನುವ ಮೂಲಕ ಗೆಲ್ಲುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.////