ಕೋವಿಡ್-19 ಹಿನ್ನಲೆ ತರಕಾರಿ ಮಾರುಕಟ್ಟೆ ಬಂದ್

0

ಬೆಳಗಾವಿ : ಕೋವಿಡ್-19 ಮಾರ್ಗಸೂಚಿಯನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿರುವ ತರಕಾರಿ ಮಾರುಕಟ್ಟೆಯನ್ನು ಲಾಕ್‍ಡೌನ್ ಹಿನ್ನಲೆಯಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಬಂದ್ ಮಾಡಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ ಕರೋನಾ ಎರಡನೇ ಅಲೆ ಹೆಚ್ಚಾಗಿರುವುದರಿಂದ ಏ.20 ರಂದು ಸರ್ಕಾರ ಹೊರಡಿಸಿದ ಆದೇಶ ಸಂ.ಆರ್‍ಡಿ 158 ಟಿಎನ್‍ಆರ್ 2020 ಅನ್ವಯ ಹಾಗೂ ಕೋವಿಡ್-19ರ ರಾಜ್ಯ ಮಾರ್ಗಸೂಚಿ ನಿಯಮಗಳ ಪ್ರಕಾರ ಲಾಕ್‍ಡೌನ್ ಇರುವುದರಿಂದ ಪ್ರತಿ ಶನಿವಾರ ಮತ್ತು ಭಾನುವಾರ ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ./////