ವಿ. ಟಿ. ಯು ಮೊದಲ ಸೆಮಿಸ್ಟರ್ ಉಳಿದ ಪರೀಕ್ಷೆಗೆ ಸಿದ್ಧತೆ

0

ಬೆಳಗಾವಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪದವಿಪೂರ್ವ ಎಂಜಿನಿಯರಿಂಗ್, ಆರ್ಕಿಟೆಕ್ಚರ್ ಹಾಗೂ ಯೋಜನಾ ವಿದ್ಯಾರ್ಥಿಗಳ ಎರಡನೇ ಸೆಮಿಸ್ಟರ್ ತರಗತಿಗಳು ಮೇ.19 ರಿಂದ ಪ್ರಾರಂಭವಾಗಲಿದ್ದು, ಮೊದಲ ಸೆಮಿಸ್ಟರ್ ಪರೀಕ್ಷೆಗಳನ್ನು ಪೂರ್ಣಗೊಳಿಸಬೇಕಾಗಿದೆ.

ಈಗಾಗಲೇ ತಿಳಿಸಿರುವ ಪರೀಕ್ಷಾ ವೇಳಾ ಪಟ್ಟಿಯಂತೆ, ಕೋವಿಡ್-19 ಸಾಂಕ್ರಾಮಿಕ ಮುನ್ನೆಚ್ಚರಿಕೆಗಳು ಹಾಗೂ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಅಧಿಸೂಚನೆಯ ಪ್ರಕಾರ ಮೊದಲ ಸೆಮಿಸ್ಟರ್ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಕೋವಿಡ್-19 ಸಾಂಕ್ರಾಮಿಕ ರೋಗದ ಅನಿವಾರ್ಯ ಕಾರಣಗಳಿಂದ ಯಾವುದೇ ವಿದ್ಯಾರ್ಥಿಯು ಪರೀಕ್ಷೆಗೆ ಗೈರು ಹಾಜರಾದರೆÉ ಅವರಿಗೆ ಎರಡನೇ ಸೆಮಿಸ್ಟರ್ ಪ್ರವೇಶಕ್ಕೆ ಅವಕಾಶ ನೀಡಲಿದ್ದು, ಮುಂದಿನ ಸೆಮಿಸ್ಟರ್ ಪರೀಕ್ಷೆಗಳಲ್ಲಿ ತಪ್ಪಿದ ಪರೀಕ್ಷೆಗಳನ್ನು ಮರಳಿ ಬರೆಯಲು ಅನುಮತಿ ನೀಡಲಾವುದು.

ಈ ಸೌಲಭ್ಯವನ್ನು ಬಿ.ಇ, ಬಿ.ಆರ್ಕ. ಹಾಗೂ ಬಿ.ಪ್ಲಾನ್ ರೆಗ್ಯೂಲರ್ ವಿದ್ಯಾರ್ಥಿಗಳಿಗೆ ಮಾತ್ರ ಒದಗಿಸಲಾಗುವುದು. ಈಗಾಗಲೇ ಎರಡು ವಿಷಯಗಳ ಪರೀಕ್ಷೆಗಳು ಪೂರ್ಣಗೊಂಡಿದ್ದು, 98% ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.

ಈಗಾಗಲೇ ನಾಲ್ಕು ತಿಂಗಳು ಪರೀಕ್ಷೆ ವಿಳಂಬವಾಗಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಯನ್ನು ಪೂರ್ಣಗೊಳಿಸಲು ವಿಶ್ವ ವಿದ್ಯಾಲಯವು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿ, ಉತ್ತಮ ಸಿದ್ಧತೆಗಳೊಂದಿಗೆ ಸಜ್ಜಾಗಿದೆ.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗಲಕ್ಷಣಗಳು ಕಂಡುಬಂದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾದ ಪರೀಕ್ಷಾ ಕೊಠಡಿಯ ವ್ಯವಸ್ಥೆ ಮಾಡಲಾಗುವುದು ಎಂದು ಕುಲಸಚಿವರಾದ ಪೆÇ್ರ. ಆನಂದ ದೇಶಪಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////