ಮೇ.4 ರವರೆಗೆ ರಾತ್ರಿ ಕಫ್ರ್ಯೂ ಹಾಗೂ ವಾರಾಂತ್ಯ ಕಪ್ರ್ಯೂ ಜಾರಿ: ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್

0

ಬೆಳಗಾವಿ, ಏ.21: ಕೋವಿಡ್ -19 ಹರಡುವುದನ್ನು ತಡೆಗಟ್ಟಲು ಹಾಗೂ ಸಾರ್ವಜನಿಕರ ಆರೋಗ್ಯ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಏ.21 ರಿಂದ ಮೇ.4 ರವರಿಗೆ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯ ವರೆಗೆ ರಾತ್ರಿ ನಿಷೇಧಾಜ್ಞೆ ಹಾಗೂ ವಾರಾಂತ್ಯ ನಿಷೇಧಾಜ್ಞೆ ಜಾರಿ ಮಾಡುವಂತೆ ಜಿಲ್ಲಾದಂಡಾಧಿಕಾರಿಗಳಾದ ಡಾ.ಕೆ ಹರೀಶ್ ಕುಮಾರ್ ಅವರು ಆದೇಶಿಸಿರುತ್ತಾರೆ.
ಏ.21 ರಿಂದ ಮೇ.4 ರವರೆಗೆ ಪ್ರತಿ ದಿನ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಹಾಗೂ ಏ.21 ರಿಂದ ಮೇ.4 ರವರಿಗೆ ಪ್ರತಿ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ಸಾರ್ವಜನಿಕರು ಅನಾವಶ್ಯಕ ಚಟುವಟಿಕೆಗಳು ಹಾಗೂ ಓಡಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ.
ಸದರಿ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾದಂಡಾಧಿಕಾರಿಗಳಾದ ಡಾ.ಕೆ ಹರೀಶ್ ಕುಮಾರ್ ಅವರು ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಕೋವಿಡ್ -19 ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ನಿಷೇಧಾಜ್ಞೆ ಸಮಯದಲ್ಲಿ ಅನಾವಶ್ಯಕವಾಗಿ ಓಡಾಡುವುದನ್ನು ಸಂಪೂರ್ಣವಾಗಿ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರಡಿ ನಿಷೇಧಿಸಿ ಅವರು ಆದೇಶ ಹೊರಡಿಸಿರುತ್ತಾರೆ.
ಈ ಮೇಲಿನ ಆದೇಶವು ಅವಶ್ಯಕ ಚಟುವಟಿಕೆಗಳಿಗೆ, ತಾಲೂಕಾ ಮಟ್ಟದ ವಿಪತ್ತು ನಿರ್ವಹಣಾ ಸಮಿತಿಯಿಂದ ಪೂರ್ವಾನುಮತಿ ಪಡೆದುಕೊಂಡ ಚಟುವಟಿಕೆಗಳಿಗೆ ಅನ್ವಯಿಸುವುದಿಲ್ಲ.
ಈ ಆದೇಶವನ್ನು ಜಾರಿಗೊಳಿಸಲು ಬೆಳಗಾವಿ ನಗರದ ಪೆÇಲೀಸ್ ಆಯುಕ್ತರು, ಜಿಲ್ಲಾ ಪೆÇಲೀಸ್ ಅಧೀಕ್ಷಕರು, ಜಿಲ್ಲೆಯ ಎಲ್ಲ ಉಪವಿಭಾಗಾಧಿಕಾರಿಗಳು, ತಹಶೀಲದಾರರು ಹಾಗೂ ಜಿಲ್ಲೆಯ ಸಂಬಂಧಪಟ್ಟ ಎಲ್ಲ ಇಲಾಖಾ ಅಧಿಕಾರಿಗಳು ಕ್ರಮಕೈಗೊಳ್ಳಲು ತಿಳಿಸಲಾಗಿದೆ.