ಸರಕಾರದಿಂದ ದಿಢೀರ್ ಲಾಕ್ ಡೌನ್ ಮಾದರಿ ಹೊಸ ಮಾರ್ಗಸೂಚಿ

0

ಬೆಂಗಳೂರು – ತೀರಾ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದೆಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುವ ಹೊಸ ಮಾರ್ಗಸೂಚಿ ಸರಕಾರದಿಂದ ಬಿಡುಗಡೆಯಾಗಿದೆ.

ಹಠಾತ್ ಆಗಿ ಈ ಮಾರ್ಗಸೂಚಿ ಪ್ರಕಟವಾಗಿದ್ದು, ಬಹುತೇಕ ಲಾಕ್ ಡೌನ್ ಮಾದರಿಯಲ್ಲೇ ಇದೆ.

ದಿನನಿತ್ಯದ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಎಲ್ಲವನ್ನೂ ಬಂದ್ ಮಾಡಿಸಲಾಗುತ್ತಿದೆ.

ವಿಚಿತ್ರವೆಂದರೆ ಸೆಲೂನ್, ಬ್ಯೂಟಿ ಪಾರ್ಲರ್, ವೈನ್ ಶಾಪ್ ಗಳಿಗೆ ಅನುಮತಿ ನೀಡಲಾಗಿದೆ.

ರಾಜ್ಯದ ಎಲ್ಲೆಡೆ ಪೊಲೀಸರು ಹಠಾತ್ ಆಗಿ ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದಾರೆ.

ಮೇ 4ರ ವರೆಗೂ ರಾಜ್ಯದಲ್ಲಿ ಇದೇ ಪರಿಸ್ಥಿತಿ ಮುಂದುವರಿಯಲಿದೆ.