ಕೋವಿಡ್ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ: ಪೊಲೀಸ್ ಆಯುಕ್ತರಾದ ಡಾ.ಕೆ. ತ್ಯಾಗರಾಜನ್ ಎಚ್ಚರಿಕೆ

0

ಬೆಳಗಾವಿ, ಏ.22 : ಕೋವಿಡ್-19 ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಸಾರ್ವಜನಿಕರ ಸುರಕ್ಷತೆ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಏ.21 ರಿಂದ ಮೇ.4 ರವರಿಗೆ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರಾದ ಡಾ.ಕೆ. ತ್ಯಾಗರಾಜನ್ ಅವರು ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ನಗರ ಪೊಲೀಸ್ ಕಮೀಷನರೇಟ್ ಘಟಕದ ವ್ಯಾಪ್ತಿಯಲ್ಲಿ ಎಲ್ಲಾ ಸಾರ್ವಜನಿಕರು ಸಾರ್ವಜನಿಕ ಪ್ರದೇಶಗಳಲ್ಲಿ ಕನಿಷ್ಟ 6 ಅಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಮತ್ತು ಮುಂಜಾಗೃತಾ ಕ್ರಮವಾಗಿ 5 ಜನರಿಗಿಂತ ಹೆಚ್ಚಾಗಿ ಸಾರ್ವಜನಿಕರು ಸೇರುವುದನ್ನು ನಿರ್ಬಂಧಿಸಲಾಗಿದೆ ಎಂದು ಅವರು ಆದೇಶದಲ್ಲಿ ಸೂಚಿಸಿದ್ದಾರೆ.

ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ :

ಈ ಆದೇಶವನ್ನು ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005ರ ಸೆಕ್ಷನ್ 51 ರಿಂದ 60ರ ಅನ್ವಯ ಹಾಗೂ ಸೆಕ್ಷನ್ 188 ಐಪಿಸಿ ಹಾಗೂ ಕರ್ನಾಟಕ ಸಾಂಕ್ರಾಮಿಕ ಕಾಯಿಲೆ ಕಾಯ್ದೆ-2020 ಮತ್ತು ಕಾನೂನು ನಿಯಮಗಳ ಅನ್ವಯ ಕ್ರಮ ಜರುಗಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರಾದ ಡಾ.ಕೆ. ತ್ಯಾಗರಾಜನ್ ಅವರು ಎಚ್ಚರಿಕೆ ನೀಡಿದ್ದಾರೆ.