ಕೋವಿಡ್‌ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ, 13 ಜನ ಸಾವು

0

ಮುಂಬೈ, ಏ. 23- ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯಿ ವಿರಾರ್‌ನಲ್ಲಿರುವ ಕೋವಿಡ್ ಆಸ್ಪತ್ರೆಯಲ್ಲಿ ಶುಕ್ರವಾರ ಮುಂಜಾನೆ ಅಗ್ನಿ ಅನಾಹುತ ಸಂಭವಿಸಿದ್ದು, 13 ಜನರು ಮೃತಪಟ್ಟಿದ್ದಾರೆ.

ನಸುಕಿನ 3 ಗಂಟೆ ವೇಳೆಗೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಐಸಿಯುನ ಎಸಿ ಘಟಕದಲ್ಲಿ ಸ್ಫೋಟ ಸಂಭವಿಸಿ ಬೆಂಕಿಹೊತ್ತಿಕೊಂಡಿತ್ತು ಎಂದು ಜಿಲ್ಲಾ ವಿಪತ್ತು ನಿಯಂತ್ರಣ ದಳದ ಮುಖ್ಯಸ್ಥ ವಿವೇಕಾನಂದ ಕದಂ ಅವರು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ 16 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು ಎಂದೂ ಅವರು ಹೇಳಿದ್ದಾರೆ. ವಸಾಯಿ ವಿರಾರ್‌ ಪಾಲಿಕೆಯ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಇತರ ಸೋಂಕಿತರನ್ನು ಸಮೀಪದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

ನಾಸಿಕ್‌ನ ಡಾ. ಝಾಕಿರ್‌ ಹುಸೇನ್‌ ಸರ್ಕಾರಿ ಆಸ್ಪತ್ರೆಯ ಆಮ್ಲಜನಕ ಘಟಕದಲ್ಲಿ ಇತ್ತೀಚೆಗೆ ಸೋರಿಕೆ ಉಂಟಾಗಿ 24 ರೋಗಿಗಳು ಮೃತ ಪಟ್ಟಿದರು.