ಕೊರೊನಾ ಸೊಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಿ: ಶಾಸಕ ಗಣೇಶ ಹುಕ್ಕೇರಿ ಸೂಚನೆ

0

ಚಿಕ್ಕೋಡಿ: “ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿ ಬದಲಾವಣೆ ಮಾಡುವ ಜೊತೆಗೆ ಕೊರೊನಾ ಸೊಂಕಿತರಿಗೆ ಉತ್ತಮ ಚಿಕಿತ್ಸೆ ನೀಡಬೇಕು” ಎಂದು ಶಾಸಕ ಗಣೇಶ ಹುಕ್ಕೇರಿ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ನಡೆದ ವೈದ್ಯಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

“ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ 90 ಹೆಚ್ಚುವರಿ ಹಾಸಿಗೆ ಮತ್ತು ಸದಲಗಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 60 ಹಾಸಿಗೆ ಕೋವಿಡ್ ಆಸ್ಪತ್ರೆ ಆರಂಭಿಸಬೇಕು. ಅದಕ್ಕೆ ಬೇಕಾದ ವೈದ್ಯರನ್ನು ಬೇರೆ ಬೇರೆ ಆಸ್ಪತ್ರೆಯಿಂದ ನಿಯೋಜನೆ ಮೇಲೆ ಕರೆಯಿಸಿಕೊಳ್ಳಬೇಕು” ಎಂದು ಸೂಚಿಸಿದರು

“ಆಕ್ಸಿಜನ್ ಮತ್ತು ವೆಂಟಿಲೇಟರ್ ಗಳ ವ್ಯವಸ್ಥೆಯನ್ನು ಸರ್ಕಾರದಿಂದ ಮಾಡಿಸಿಕೊಡಲಾಗುವುದು. ಆದರೆ, ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು” ಎಂದು ಹೇಳಿದರು.

ತಹಶೀಲ್ದಾರ್ ಪ್ರವೀಣ ಜೈನ್, ಕೊರೊನಾ ನಿಯಂತ್ರಣಕ್ಕೆ ತಾಲೂಕು ಆಡಳಿತದಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

ಅಪರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್. ಗಡೇದ, ತಾಲೂಕಾ ಆರೋಗ್ಯಾಧಿಕಾರಿ ಡಾ.ವಿ.ವಿ. ಶಿಂಧೆ, ಡಾ. ಸಂತೋಷ ಕೊಣ್ಣೂರೆ, ಬಿ.ಎ. ಕುಂಬಾರ ಸೇರಿ ಇನ್ನಿತರರು ಉಪಸ್ಥಿತರಿದ್ದರು.