ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಲಾಕ್‌ಡೌನ್ ದುರ್ಬಳಕೆ ಬೇಡ: ಶಾಸಕ ಯತ್ನಾಳ

0

ವಿಜಯಪುರ: ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳುವ ರಾಜಕೀಯ ಸ್ವಾರ್ಥಕ್ಕಾಗಿ ಕೋವಿಡ್ ಲಾಕ್‌ಡೌನ್ ದುರ್ಬಳಕೆ ಆಗದಿರಲಿ. ರೋಗ ನಿಯಂತ್ರಣಕ್ಕೆ ಬಂದ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಲಾಕ್‌ಡೌನ್ ಹಿಂಪಡೆಯಬೇಕು ಎಂದು ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ.

ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಲಾಕ್‌ಡೌನ್ ಜೂನ್ 7ಕ್ಕೆ ಕೊನೆಗೊಳ್ಳಲಿದ್ದು, ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬಂದ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಲಾಕ್‌ಡೌನ್ ತೆರವುಗೊಳಿಸಬೇಕು ಎಂದು ಹೇಳಿದರು.

ಲಾಕ್‌ಡೌನ್ ಕಾರಣದಿಂದ ಸಾಮಾನ್ಯ, ಬಡ-ಕೂಲಿ ಕಾರ್ಮಿಕರು ಕೆಲಸ ಇಲ್ಲದೇ ಜೀವನ ನಿರ್ವಹಣೆಗೆ ಪರದಾಡುತ್ತಿದ್ದಾರೆ. ಹೀಗಾಗಿ ಉದ್ಯೋಗ ಸೃಷ್ಟಿಗೂ ಸರ್ಕಾರ ಪರ್ಯಾಯ ಕ್ರಮಕ್ಕೆ ಮುಂದಾಗಬೇಕು ಎಂದರು.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');