ದಿ. ಸುರೇಶ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ

0

ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದ, ಕೇಂದ್ರದ ರೈಲ್ವೆ ಖಾತೆ ಸಚಿವರಾಗಿದ್ದ ದಿ. ಸುರೇಶ ಅಂಗಡಿ ಜನ್ಮದಿನವನ್ನು ಎಐಟಿಎಂ ಕಾಲೇಜು ಆವರಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ದಿ. ಸುರೇಶ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಅವರ ಜನಸೇವಾ ಕಾರ್ಯವನ್ನು ಸ್ಮರಿಸಲಾಯಿತು. ಅಗತ್ಯವುಳ್ಳವರಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಲಾಯಿತು.

ಬೆಳಗಾವಿ ಸಂಸದ, ಕೇಂದ್ರ ಸಚಿವರಾಗಿದ್ದ ದಿ. ಸುರೇಶ ಅಂಗಡಿ ಅವರ ಜನ್ಮದಿನದ ಅಂಗವಾಗಿ ಎಐಟಿಎಂ ಕಾಲೇಜು ಆವರಣದಲ್ಲಿ ಮಂಗಳವಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕುಟುಂಬದವರು, ಆಪ್ತರು, ಅಭಿಮಾನಿಗಳು ದಿ. ಸುರೇಶ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಅವರ ಜನಸೇವಾ ಕಾರ್ಯವನ್ನು ಸ್ಮರಿಸಿದರು.

ಇದೇ ಸಂದರ್ಭದಲ್ಲಿ ಕೋವಿಡ್ ಸಂಕಷ್ಟದಲ್ಲಿರುವ ಆಟೋ, ಟ್ಯಾಕ್ಸಿ ಚಾಲಕರು ಹಾಗೂ ಕ್ಷೇತ್ರದ ಬಡಜನರಿಗೆ ಆಹಾರ ಧಾನ್ಯಗಳ ಕಿಟ್‍ಗಳನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಅಂಗಡಿ ಎಜ್ಯುಕೇಶನ್ ಫೌಂಡೇಶನ್‍ನ ನಿರ್ದೇಶಕಿ ಡಾ. ಸ್ಫೂರ್ತಿ ಅಂಗಡಿ ಪಾಟೀಲ, ಯುವ ಮುಖಂಡರಾದ ಶ್ರದ್ಧಾ ಅಂಗಡಿ ಶೆಟ್ಟರ್, ಕಾಲೇಜಿನ ಆಡಳಿತ ವರ್ಗ, ಸಿಬ್ಬಂದಿ ವರ್ಗ, ಸ್ಥಳೀಯ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');