ಖೋಟಾ ನೋಟಿನಲ್ಲಿ ಭಾಗಿಯಾದ 6 ಕುಳಗಳು ಅಂದರ್

0

ದಾಂಡೇಲಿ : ಭಾರಿ ಪ್ರಮಾಣದ ಖೋಟಾ ನೋಟಿನಲ್ಲಿ ಭಾಗಿಯಾದ 6 ಕುಳಗಳನ್ನು ಪೊಲೀಸ್ ರು ಬುಧವಾರ ಬಂಧಿಸಿದ್ದಾರೆ.

ಬೆಳಗಾವಿಯ ಅಮರ ನಾಯ್ಕ(30), ಮಹಾರಾಷ್ಟ್ರದ ಕಿರಣ ದೇಸಾಯಿ(40), ಗಿರೀಶ ಪೂಜಾರಿ(42), ಸಾಗರ ಕುಣ್ಣೂರ್ಕರ್(28), ದಾಂಡೇಲಿಯ ಶಬ್ಬೀರ್ ಕುಟ್ಟಿ(45), ಶಿವಾಜಿ ಕಾಂಬ್ಳೆ(52) ಬಂಧಿತ ಆರೋಪಿಗಳು,

ಡಿಡಿಎಲ್ ವನಶ್ರೀ ಭಾಗದ ಶಿವಾಜಿ ಕಾಂಬ್ಳೆ ಎನ್ನುವವರ ಮನೆಯಲ್ಲಿ ಖೋಟಾನೋಟು ವ್ಯವಹಾರ ಮಾಡುತ್ತಿರುವ ವೇಳೆ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ . ಬಂಧಿತರಿಂದ 4.5 ಲಕ್ಷ ಅಸಲಿ ನೋಟು, 72 ಲಕ್ಷದ ಖೋಟಾ ನೋಟು ವಶಕ್ಕೆ ಪಡೆಲಾಗಿದೆ.

4.5 ಲಕ್ಷ ಅಸಲಿ ನೋಟು ಪಡೆದು 9 ಲಕ್ಷ ನಕಲಿ ನೋಟು ನೀಡಲು ಮುಂದಾಗಿದ್ದ ವೇಳೆ  “ಖಾಕಿ”  ಪಡೆ  ಭರ್ಜರಿ ಕಾರ್ಯಾಚರಣೆ ನಡೆಸಿದೆ.  ವ್ಯವಹಾರಕ್ಕೆ ಬಳಸಿದ್ದ ಎರಡು ಕಾರು ವಶಪಡಿಸಿಕೊಳ್ಳಲಾಗಿದೆ.

ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಪೊಲೀಸರ್ ಕಾರ್ಯವನ್ನು ಎಸ್ಪಿ ಪ್ರಶಂಸಿಸಿದ್ದಾರೆ.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');