ಜನರಿಗೆ ನೆರವಾಗಲು ರಾಜು ಗೌಡ ಸೇವಾ ಸಮಿತಿಗೆ 1.11 ಲಕ್ಷ ರೂ. ದೇಣಿಗೆ ನೀಡಿದ ಪಿಡಿಓ ಗಳು

0

ಸುರಪುರ: ಕೋವಿಡ್ ನಿಂದ ತೊಂದರೆಗೊಳಗಾಗಿರುವ ಸುರಪುರ ಮತಕ್ಷೇತ್ರದ ಜನರ ನೆರವಿಗಾಗಿ ಸುರಪುರ ತಾಲೂಕು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃಧ್ಧಿ ಸಂಘದಿಂದ ರಾಜುಗೌಡ ಸೇವಾ ಸಮಿತಿಗೆ 1.11 ಲಕ್ಷ ರೂಪಾಯಿಗಳ ದೇಣಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ದೇಣಿಗೆಯನ್ನು ಸ್ವೀಕರಿಸಿ ಮಾತನಾಡಿದ ಶಾಸಕ ರಾಜು ಗೌಡ, ಕೊರೊನಾ ಲಾಕ್‍ಡೌನ್ ನಿಂದಾಗಿ ಕ್ಷೇತ್ರದಲ್ಲಿನ ಜನರು ತೀವ್ರ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇದನ್ನು ಅರಿತು ಸುರಪುರ ಮತ್ತು ಹುಣಸಗಿ ತಾಲೂಕಿನಲ್ಲಿನ ಜನರ ನೆರವಿಗಾಗಿ ತಾವೆಲ್ಲರು ಸಹಕಾರಕ್ಕೆ ಮುಂದೆ ಬಂದಿರುವುದು ತುಂಬಾ ಸಂತೋಷದ ಸಂಗತಿ” ಎಂದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಂಬ್ರೇಶ ಸೇರಿದಂತೆ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು ಇದ್ದರು.

ಪತ್ರಕರ್ತರಿಗೆ ಕೋವಿಡ್ ನೆರವು ಘೋಷಣೆ ಮಾಡುವಂತೆ ಒತ್ತಾಯ:
ರಾಜ್ಯದಲ್ಲಿನ ಎಲ್ಲಾ ಪತ್ರಕರ್ತರಿಗೆ ಕೋವಿಡ್ ನೆರವು ಘೋಷಣೆ ಮಾಡುವಂತೆ ಕೆಜೆಯು ವತಿಯಿಂದ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಶಾಸಕ ರಾಜುಗೌಡ ಅವರಿಗೆ ಸಲ್ಲಿಸಲಾಯಿತು.

ಮನವಿ ಸಲ್ಲಿಸಿದ ಕೆಜೆಯು ತಾಲೂಕು ಅಧ್ಯಕ್ಷ ರಾಜು ಕುಂಬಾರ ಮಾತನಾಡಿ, ರಾಜ್ಯದಲ್ಲಿಯ ದೃಶ್ಯ ಮತ್ತು ಮುದ್ರಣ ಮಾದ್ಯಮಗಳಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರು ಕಳೆದ ಒಂದು ವರ್ಷದಿಂದ ತೀವ್ರ ತೊಂದರೆಯನ್ನು ಅನುಭವಿಸುತ್ತಿದ್ದು ಸರಕಾರ ಎಲ್ಲಾ ಪತ್ರಕರ್ತರ ನೆರವಿಗೆ ಬರುವಂತೆ ತಾವುಕೂಡ ಸರಕಾರಕ್ಕೆ ಮನವರಿಕೆ ಮಾಡುವಂತೆ ವಿನಂತಿಸಿದರು.

ರಾಜ್ಯದಲ್ಲಿನ ಎಲ್ಲಾ ಪತ್ರಕರ್ತರು ಕೊರೊನಾ ಸಂದರ್ಭದಲ್ಲಿ ಜೀವದ ಹಂಗು ತೊರೆದು ಸುದ್ದಿ ಮಾಡುತ್ತಿದ್ದಾರೆ. ಅದನ್ನು ಪರಿಗಣಿ ಮುಖ್ಯಮಂತ್ರಿ ಯಡಿಯೂರಪ್ಪನವರು ಪತ್ರಕರ್ತರನ್ನು ಕೊರೊನಾ ವಾರಿಯರ್ಸ್ ಎಂದು ಘೋಷಿಸಿದ್ದಾರೆ. ಆರ್ಥಿಕ ನೆರವು ನೀಡುವಂತೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಶಾಸಕ ನರಸಿಂಹ ನಾಯಕ (ರಾಜು ಗೌಡ) ಹೇಳಿದರು.

ಈ ಸಂದರ್ಭದಲ್ಲಿ ಕೆಜೆಯು ತಾಲೂಕು ಉಪಾಧ್ಯಕ್ಷರಾದ ಮಲ್ಲು ಗುಳಗಿ, ಖಜಾಂಚಿ ಮಹಾದೇವಪ್ಪ ಬೊಮ್ಮನಹಳ್ಳಿ ಮನಮೋಹನ ಪ್ರತಿಹಸ್ತ, ಮದನಕುಮಾರ ಕಟ್ಟಿಮನಿ, ಶ್ರೀಮಂತ ಚಲವಾದಿ, ನಾಗರಾಜ ನಾಯಕ ಸೇರಿದಂತೆ ಇನ್ನಿತರರು ಇದ್ದರು.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');