ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಗೆ 5,000 ರೂ. ಪ್ರೋತ್ಸಾಹಧನ ಘೋಷಿಸಿದ ತಮಿಳುನಾಡು ಸರ್ಕಾರ

0

ಚೆನ್ನೈ: ಕೊರೊನಾ ವಾರಿಯರ್ಸ್‌ ಆಗಿರುವ ಪೊಲೀಸ್‌ ಸಿಬ್ಬಂದಿಗಳಿಗೆ ತಮಿಳುನಾಡು ಸರ್ಕಾರ 5000 ರೂಪಾಯಿಗಳ ವಿಶೇಷ ಪ್ರೋತ್ಸಾಹಕವನ್ನು ಘೋಷಿಸಿದೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕೋವಿಡ್ ಕರ್ತವ್ಯದಲ್ಲಿ ನಿರತರಾಗಿರುವ ಪೊಲೀಸ್ ಸಿಬ್ಬಂದಿಗೆ 5000 ರೂ.ಗಳ ವಿಶೇಷ ಪ್ರೋತ್ಸಾಹಧನವನ್ನು ಇಂದು ಘೋಷಣೆ ಮಾಡಿದ್ದು, ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದಾರೆ. “ಪೊಲೀಸ್ ಸಿಬ್ಬಂದಿಯಿಂದ ನಿಸ್ವಾರ್ಥ ಸೇವೆ ಒದಗಿಸಲಾಗುತ್ತಿದೆ. ಕೋವಿಡ್-19 ರ ಎರಡನೇ ಅಲೆಯ ಸಮಯದಲ್ಲಿ ತಮ್ಮ ಜೀವವನ್ನು ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುತ್ತಿದ್ದಾರೆ” ಎಂದಿದ್ದಾರೆ. ತಮಿಳುನಾಡಿನಲ್ಲಿ 1,17,184 ಪೊಲೀಸ್ ಸಿಬ್ಬಂದಿ ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ತಮಿಳುನಾಡಿನಲ್ಲಿ ಈಗಾಗಲೇ ಆರೋಗ್ಯ ಕಾರ್ಯಕರ್ತರು, ಪತ್ರಕರ್ತರು, ಪುರೋಹಿತರು ಸೇರಿ ವಿವಿಧ ವಿಭಾಗಗಳಿಗೆ ನೆರವು ನೀಡಲಾಗಿದೆ./////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');