ಬುದ್ಧಿಮಾಂಧ್ಯರಿಗೆ, ಆರೈಕೆದಾರರಿಗೆ ಕೋವಿಡ್ ನಿರೋಧಕ ಲಸಿಕೆ

0

ಬೆಳಗಾವಿ, ಜೂ.3 : ಕೊವಿಡ್-19 ಸಾಂಕ್ರಾಮಿಕ ರೋಗದ ಉಲ್ಬಣತೆ ಹಿನ್ನೆಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆಶ್ರಯದಲ್ಲಿ ಬೆಳಗಾವಿ ನಗರದ ಮಾಹೇಶ್ವರಿ ಅಂಧ ಮಕ್ಕಳ ಶಾಲೆಯಲ್ಲಿ 18 ವರ್ಷ ಮೇಲ್ಪಟ್ಟ ಮಾನಸಿಕ ಅಸ್ವಸ್ಥರು ಮತ್ತು ಬುದ್ಧಿಮಾಂದ್ಯ ವಿಕಲಚೇತನ ವ್ಯಕ್ತಿಗಳಿಗೆ ಹಾಗೂ ಆರೈಕೆದಾರರಿಗೆ ಕೋವಿಡ್ ನಿರೋಧಕ ಲಸಿಕೆ ನೀಡುವ ಕಾರ್ಯಕ್ರಮ ಗುರುವಾರ(ಜೂ.3) ಹಮ್ಮಿಕೊಳ್ಳಲಾಯಿತು.


ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿಜಯ ದೇವರಾಜ ಅರಸು ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬೆಳಗಾವಿ ಉತ್ತರ ಕ್ಷೇತ್ರದ ಶಾಸಕರಾದ ಅನೀಲ್ ಬೆನಕೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ನಾಮದೇವ ಬಿಲ್ಕರ್, ಜಿಲ್ಲಾ ಅಂಧ ಸೇವಾ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಬೈಲಹೊಂಗಲ ಕಾರ್ಮೆಲ್ ಬುದ್ಧಿಮಾಂದ್ಯ ಮಕ್ಕಳ ಶಾಲೆಯಲ್ಲಿ ಲಸಿಕಾಕರಣ:

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅನುದಾನದಡಿ ಬೈಲಹೊಂಗಲ ನಗರದಲ್ಲಿ ನಡೆಯುತ್ತಿರುವ ಕಾರ್ಮೆಲ್ ಬುದ್ಧಿಮಾಂದ್ಯ ಮಕ್ಕಳ ಶಾಲೆಯಲ್ಲಿ ಆಶ್ರಯದಲ್ಲಿ ಶಾಲೆಯ 18 ವರ್ಷ ಮೇಲ್ಪಟ್ಟ ಬುದ್ಧಿಮಾಂದ್ಯ ವಿಕಲಚೇತನ ವ್ಯಕ್ತಿಗಳಿಗೆ ಹಾಗೂ ಆರೈಕೆದಾರರಿಗೆ ಕೊವಿಡ್-19 ರ ಲಸಿಕೆ ನೀಡುವ ಕಾರ್ಯಕ್ರಮ ಕೂಡ ಗುರುವಾರ ನಡೆಯಿತು.

ಬೈಲಹೊಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಮಹಾಂತೇಶ ಕೌಜಲಗಿ ಅವರು ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಮೆಲ್ ವಿದ್ಯಾ ವಿಕಾಸ ಕೇಂದ್ರ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');