ಬಿಮ್ಸ್ ಆಡಳಿತಾಧಿಕಾರಿಯಾಗಿ ಆಮ್ಲಾನ್ ಆದಿತ್ಯ ಬಿಸ್ವಾಸ್ ನೇಮಕ : ಸಿಎಂ ಬಿ.ಎಸ್. ಯಡಿಯೂರಪ್ಪ

0

ಬೆಳಗಾವಿ : ಕೋವಿಡ್ ಸೋಂಕಿತರಿಗೆ ಸಮರ್ಪಕ ಚಿಕಿತ್ಸೆ ಒದಗಿಸುವುದು ಸೇರಿದಂತೆ ಆಡಳಿತಾತ್ಮಕ ಸುಧಾರಣೆಗೆ ಅನುಕೂಲವಾಗುವಂತೆ ಬೆಳಗಾವಿ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರನ್ನು ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್)ಯ ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ನಡೆದ ಸಭೆಯಲ್ಲಿ ಪ್ರಕಟಿಸಿದರು.

ಬಿಮ್ಸ್ ಅಗತ್ಯ ಸಿಬ್ಬಂದಿಯ ನೇಮಕಾತಿಗಾಗಿ ಈಗಾಗಲೇ ಅನುಮತಿಯನ್ನು ನೀಡಲಾಗಿದೆ.20 ಕೆ.ಎಲ್. ಆಕ್ಸಿಜನ್ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದ್ದು, ಜಿಲ್ಲಾ ಆಸ್ಪತ್ರೆಗಳ ಮೂಲ ಸೌಕರ್ಯಗಳನ್ನು ಒದಗಿಸಲು ಸರಕಾರ ಬದ್ಧವಿದೆ ಎಂದು ತಿಳಿಸಿದರು.

ಉಪ ಮುಖ್ಯಮಂತ್ರಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ತಾಲ್ಲೂಕು ಆಸ್ಪತ್ರೆಗಳಲ್ಲಿ ಇರುವ ವೆಂಟಿಲೇಟರ್ ಗಳ ಬಳಕೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');