“ವರುಣಾರ್ಭಟಕ್ಕೆ ಬೆಳಗಾವಿ ಜನಜೀವನ ಅಸ್ತವ್ಯಸ್ತ”

0

ಬೆಳಗಾವಿ:  ನಗರದಲ್ಲಿ ಶನಿವಾರ  ಧಾರಾಕಾರ ಮಳೆ ಸುರಿದಿದ್ದು, ಮಳೆ ಅವಾಂತರದಿಂದ ತಗ್ಗುಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿದೆ.  ಕೇವಲ 40 ನಿಮಿಷಗಳ ವರುಣಾರ್ಭಟಕ್ಕೆ ಬೆಳಗಾವಿ ಜನಜೀವನ ಅಸ್ತವ್ಯಸ್ತವಾಗಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಈಗಾಗಲೇ ಮಳೆಯ ಅಬ್ಬರಕ್ಕೆ ಐವರು ಪ್ರಾಣ ಕಳೆದುಕೊಂಡಿರುವುದು ವರದಿಯಾಗಿದೆ. ವಿಜಯಪುರ, ಬೆಳಗಾವಿ, ಗದಗ ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗುತ್ತಿದ್ದು, ಇಂದು ಭಾರೀ ಮಳೆ ಸುರಿಯಬಹುದೆಂದು ಅಂದಾಜಿಸಲಾಗಿದೆ. ಜೂನ್ 3ರಂದು ಕೇರಳಕ್ಕೆ ಮುಂಗಾರಿನ ಪ್ರವೇಶವಾಗಿರುವ ಕಾರಣ ಕರ್ನಾಟಕದ ಕರಾವಳಿ ತೀರದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಅಂತೆಯೇ ಜೂನ್ 6ರವರೆಗೆ ಕರ್ನಾಟಕದ ವಿವಿಧೆಡೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

ನೈರುತ್ಯ ಮುಂಗಾರು ಕರ್ನಾಟಕವನ್ನು ಪ್ರವೇಶಿಸಿದೆ. ಆದ ಕಾರಣ ಇಂದಿನಿಂದ ಮಳೆ ಆರ್ಭಟ ಹೆಚ್ಚಾಗುವ ಸಾಧ್ಯತೆಯಿದ್ದು, ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಅಧಿಕ ಪ್ರಮಾಣದ ಮಳೆಯನ್ನು ನಿರೀಕ್ಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದ್ದು, ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರವಾಗಿರುವುದರಿಂದ ಇನ್ನೂ 2 ದಿನಗಳ ಕಾಲ ಮಳೆ ಮುಂದುವರೆಯುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಹಾಗೂ ನಾಳೆ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಸುರಿಯಲಿದ್ದು, ಬೀದರ್, ಗದಗ, ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ಕೊಡಗು, ಕೋಲಾರ, ತುಮಕೂರು, ಹಾಸನ, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದಲೂ ನಿರಂತರವಾಗಿ ಮಳೆ ಸುರಿಯುತ್ತಿದ್ದು ಇಂದು ಮುಂಜಾನೆ ಕೂಡಾ ತುಂತುರು ಮಳೆಯ ಸಿಂಚನವಾಗುತ್ತಿದೆ ಎಂದು ವದರಿಯಾಗಿದೆ.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');