ವರ್ಗಾವಣೆ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ನಿವಾಸಕ್ಕೆ ರೋಹಿಣಿ ಸಿಂಧೂರಿ ಭೇಟಿ

0

ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳ ಜಟಾಪಟಿಗೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್​ರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ವರ್ಗಾವಣೆ ಆದೇಶ ಹೊರ ಬಿದ್ದ ಬಿನ್ನಲ್ಲೇ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಮನೆಗೆ ಆಗಮಿಸಿದ್ದಾರೆ.

ಸಿಎಂ ನಿವಾಸ ಕಾವೇರಿಗೆ ಇಂದು (ಜೂನ್ 6) ಬೆಳಿಗ್ಗೆ ಭೇಟಿ ನೀಡಿದ ರೋಹಿಣಿ ಸಿಂಧೂರಿ ವರ್ಗಾವಣೆ ತಡೆಹಿಡಿಯುವಂತೆ ಮುಖ್ಯಮಂತ್ರಿಗೆ ಕೋರಿದ್ದಾರೆ. ಇಡೀ ಪ್ರಕರಣದಲ್ಲಿ ನನ್ನಿಂದ ಯಾವುದೇ ತಪ್ಪಾಗಿಲ್ಲ ಎಂದು ಸಿಎಂಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದ ರೋಹಿಣಿ, ವರ್ಗಾವಣೆ ತಡೆಹಿಡಿಯುವಂತೆ ಮನವಿ ಮಾಡಿದ್ದರು. ಆದರೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರೋಹಿಣಿ ಮನವಿಯನ್ನು ನಿರಾಕರಿಸಿದ್ದಾರೆ. ಯಾವುದೇ ಕಾರಣಕ್ಕೂ ವರ್ಗಾವಣೆ ತಡೆ ಅಸಾಧ್ಯ ಎಂದು ಸಿಎಂ ತಿಳಿಸಿದ್ದಾರೆ.

ಮುಖ್ಯಮಂತ್ರಿ ಮನವಿಯನ್ನು ಒಪ್ಪದ ಕಾರಣ ನಿರಾಸೆಯಿಂದ ರೋಹಿಣಿ ಸಿಂಧೂರಿ ವಾಪಸಾಗಿದ್ದಾರೆ. ಸಿಎಂ ಭೇಟಿಗೆ ಖಾಸಗಿ ಕಾರಿನಲ್ಲಿ ಆಗಮಿಸಿದ್ದ ಮೈಸೂರು ಜಿಲ್ಲಾಧಿಕಾರಿ ಸಿಂಧೂರಿ ಸುಮಾರು ಅರ್ಧ ಗಂಟೆ ಸಿಎಂ ನಿವಾಸದಲ್ಲಿ ಇದ್ದರು. ರೋಹಿಣಿ ಸಿಂಧೂರಿಯನ್ನು ಧಾರ್ಮಿಕ ದತ್ತಿ ಇಲಾಖೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವರ್ಗಾವಣೆಯನ್ನು ರದ್ದು ಮಾಡುವಂತೆ ರೋಹಿಣಿ ಕೇಳಿದರು. ಒಮ್ಮೆ ವರ್ಗಾವಣೆಯಾದ ಬಳಿಕ ಅದು ಸಾಧ್ಯವಾಗುವುದಿಲ್ಲ. ಹೀಗಾಗಿ, ಹೊಸದಾಗಿ ಸೂಚಿಸಿರುವ ಹುದ್ದೆಗೆ ರಿಪೋರ್ಟ್ ಮಾಡಿಕೊಳ್ಳುವಂತೆ ರೋಹಿಣಿ ಸಿಂಧೂರಿಯವರಿಗೆ ಸೂಚಿಸಿದ್ದೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');