ಸಿನಿಮಾ ಕಾರ್ಮಿಕರಿಗೆ 10 ಲಕ್ಷ ರೂ. ನೆರವು ನೀಡಿದ ನಟ ಪುನೀತ್ ರಾಜ್‍ಕುಮಾರ್

0

ಬೆಂಗಳೂರು: ನಟ ಪುನೀತ್ ರಾಜ್‍ಕುಮಾರ್ ಸಿನಿ ಕಾರ್ಮಿಕರ ಸಂಕಷ್ಟಕ್ಕೆ ಮಿಡಿದಿದ್ದು, ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ರೂ.ಗಳನ್ನು ನೀಡಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ರೂ.ನೀಡಿದ್ದಾರೆ. ಇಂದು ಮಧ್ಯಾಹ್ನ ಒಕ್ಕೂಟದ ಖಾತೆಗೆ ನೇರವಾಗಿ ಹಣವನ್ನು ಜಮೆ ಮಾಡಿದ್ದಾರೆ. ಈ ಕುರಿತು ಒಕ್ಕೂಟದ ಅಧ್ಯಕ್ಷ ಸಾ.ರಾ.ಗೋವಿಂದ್ ಅವರು ಮಾಹಿತಿ ನೀಡಿದ್ದು, ಪುನೀತ್ ರಾಜ್‍ಕುಮಾರ್ ಅವರು ಹಣ ನೀಡಿರುವುದನ್ನು ಖಚಿತಪಡಿಸಿದ್ದಾರೆ.

ಈಗಾಗಲೇ ಹಲವು ನಟರು ಸಿನಿ ಕಾರ್ಮಿಕರ ನೆರವಿಗೆ ಧಾವಿಸಿದ್ದು, ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ. ನಟರಾದ ಉಪೇಂದ್ರ, ಕಿಚ್ಚ ಸುದೀಪ್ ಹಿರಿಯ ಕಲಾವಿದರಿಗೆ ನೆರವಾಗಿದ್ದರು. ಬಳಿಕ ಯಶ್ 3 ಸಾವಿರಕ್ಕೂ ಅಧಿಕ ಇರುವ ನಮ್ಮ ಕಲಾವಿದರು, ತಂತ್ರಜ್ಞರು ಹಾಗೂ ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ 5 ಸಾವಿರ ರೂ. ಗಳನ್ನು ನನ್ನ ಸಂಪಾದನೆಯ ಹಣದಿಂದ ಭರಿಸುತ್ತಿದ್ದೇನೆ ಎಂದು ಘೊಷಿಸಿದ್ದರು. ಬಳಿಕ ಅದರಂತೆ ಈಗಾಗಲೇ ಕಾರ್ಮಿಕರ ಖಾತೆಗಳಿಗೆ ಹಣವನ್ನು ಸಹ ಯಶ್ ತಲುಪಿಸಿದ್ದಾರೆ.

ಕೊರೊನಾ ಲಾಕ್‍ಡೌನ್‍ನಿಂದಾಗಿ ಕಾರ್ಮಿಕರು ಕೆಲಸವಿಲ್ಲದೇ ಮನೆಯಲ್ಲೇ ಕಾಲ ಕಳೆಯುವಂತಾಗಿದ್ದು, ಹಣಕ್ಕಾಗಿ ಪರದಾಡುವ ಸ್ಥಿತಿ ಎದುರಾಗಿದೆ. ಹೀಗಾಗಿ ಸ್ಟಾರ್ ನಟರು ಕಾರ್ಮಿಕರ ನೆರವಿಗೆ ಧಾವಿಸುತ್ತಿದ್ದಾರೆ.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');