ವಿಕಲಚೇತನರು ಲಸಿಕಾಕರಣದ ಸದುಪಯೋಗ ಪಡೆದುಕೊಳ್ಳಬೇಕು : ಶಾಸಕಿ ಡಾ.ಅಂಜಲಿ ನಿಂಬಾಳ್ಕರ್

0

ಬೆಳಗಾವಿ, ಜೂ.7 :ಕೋವಿಡ್-19 ರೋಗದ ಚಿಕಿತ್ಸೆಗೆ ಸೂಕ್ತ ಔಷಧಿ ಇಲ್ಲದೆ ಇರುವುದರಿಂದ ಲಸಿಕಾಕರಣವೇ ಏಕೈಕ ಮಾರ್ಗವಾಗಿದ್ದು, ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಲಸಿಕೆಯನ್ನು ಪಡೆಯುವ ಅಗತ್ಯವಿದೆ. ವಿಕಲಚೇತನರು ಲಸಿಕಾಕರಣದ ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕಿ ಡಾ.ಅಂಜಲಿ ಹೇಮಂತ ನಿಂಬಾಳ್ಕರ್ ತಿಳಿಸಿದರು.


ಖಾನಾಪೂರ ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ಸೋಮವಾರ (ಜೂ.7) ತಾಲ್ಲೂಕಿನ 18 ವರ್ಷ ಮೇಲ್ಪಟ್ಟ ವಿಕಲಚೇತನರಿಗೆ ಕೋವಿಡ್-19 ಲಸಿಕಾಕರಣದ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಆದೇಶದಂತೆ 18 ವರ್ಷ ಮೇಲ್ಪಟ್ಟ ವಿಕಲಚೇತನರಿಗೆ ಲಸಿಕೆ ನೀಡಲಾಗುತ್ತಿದೆ. ಮೂರನೇ ಅಲೆಯಿಂದ ರಕ್ಷಿಸಿಕೊಳ್ಳಲು ಸೂಕ್ತ ಸಾಮಾಜಿಕ ಅಂತರ ಸಾನಿಟೈಜರ್ ಬಳಕೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕಾಗಿದೆ.

ಅಲ್ಲದೇ,ಸಮಾಜದ ಎಲ್ಲರೂ ಜವಾಬ್ದಾರಿಯುತವಾಗಿ ವರ್ತಿಸುವ ಮುಖಾಂತರ ನಮ್ಮೆಲ್ಲರ ರಕ್ಷಣೆಯ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಶಾಸಕಿ ಡಾ.ಅಂಜಲಿ ಹೇಮಂತ ನಿಂಬಾಳ್ಕರ್ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಖಾನಾಪೂರದ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿ, ತಾಲೂಕು ಆರೋಗ್ಯ ಅಧಿಕಾರಿ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮಮೂರ್ತಿ ಕೆ.ವಿ. ಮತ್ತಿತರರು ಉಪಸ್ಥಿತರಿದ್ದರು.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');