ಇಂದು ಪ್ರಮಾಣವಚನ ಸ್ವೀಕರಿಸಿದ ಉಪಚುನಾವಣೆಯಲ್ಲಿ ಗೆದ್ದ ಇಬ್ಬರು ಶಾಸಕರು

0

ಬೆಂಗಳೂರು: ಇತ್ತೀಚೆಗೆ ನಡೆದ ವಿಧಾನಸಭೆಯ ಉಪಚುನಾವಣೆಯಲ್ಲಿ ವಿಜೇತರಾಗಿದ್ದ ಇಬ್ಬರು ನೂತನ ಶಾಸಕರು ಇಂದು ಪ್ರಮಾಣವಚನ ಸ್ವೀಕರಿಸಿದರು.

ಮಸ್ಕಿ ವಿಧಾನಸಭಾ ಮತಕ್ಷೇತ್ರದ ಶಾಸಕ ಬಸನಗೌಡ ತುರವೀಹಾಳ್ ಹಾಗೂ ಬಸವಕಲ್ಯಾಣ ಕ್ಷೇತ್ರದ ಶಾಸಕ ಶರಣು ಸಲಗಾರ ಅವರಿಗೆ ವಿಧಾನಸೌಧದಲ್ಲಿ ಮಂಗಳವಾರ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಧಿಕಾರ ಗೌಪ್ಯತೆ ಬೋಧಿಸಿದರು.

ಇಬ್ಬರು ಶಾಸಕರು ಸತ್ಯ, ನ್ಯಾಯ, ನಿಷ್ಠೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಬಿಜೆಪಿ ಶಾಸಕ ಶರಣು ಸಲಗಾರ ಅವರಿಗೆ ಉಪಮುಖ್ಯಮಂತ್ರಿ ಲಕ್ಮಣ್ ಸವದಿ, ಬೀದರ್ ಲೋಕಸಭಾ ಕ್ಷೇತ್ರದ ಸದಸ್ಯ ಭಗವಂತ ಖೂಬಾ, ಸಚಿವ ಪ್ರಭು ಚವ್ಹಾನ ಹಾಗೂ ಕುಟುಂಬದ ಸದಸ್ಯರು ಸೇರಿದಂತೆ ಮತ್ತಿತರರು ಸಾಥ್ ನೀಡಿದರು.

ನೂತನ ಶಾಸಕರು:

ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಶರಣು ಸಲಗಾರ ಅವರು ಕಾಂಗ್ರೆಸ್ ಅಭ್ಯರ್ಥಿ ಮಾಲಾ ಬಿ. ನಾರಾಯಣರಾವ್ ಅವರನ್ನು ಪರಭಾವಗೊಳಿಸಿದ್ದರು. ಈ ಹಿಂದೆ ಶಾಸಕರಾಗಿದ್ದ ನಾರಾಯಣರಾವ್ ನಿಧನರಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು.

ಇನ್ನು ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ್ ಅವರು ಬಿಜೆಪಿಯ ಪ್ರತಾಪ್ ಗೌಡ ಪಾಟೀಲ್ ಅವರನ್ನು ಸೋಲಿಸಿ ಗೆಲುವಿನ ನಗೆ ಬೀರಿದ್ದರು.

ಕಾಂಗ್ರೆಸ್ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ಅವರು ಬಿಜೆಪಿ ಸೇರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಉಪಚುನಾವಣೆ ನಡೆದಿತ್ತು./////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');