ವೃತ್ತಿಪರ ಕೋರ್ಸ್ ಸೀಟು ಹಂಚಿಕೆಗೆ ಈ ವರ್ಷ ಕೇವಲ ಸಿಇಟಿ ಪರೀಕ್ಷೆಯ ಅಂಕಗಳಷ್ಟೇ ಮಾನದಂಡ; ಸರ್ಕಾರದಿಂದ ಮಹತ್ವದ ನಿರ್ಧಾರ

0

ಬೆಂಗಳೂರು: ವೃತ್ತಿಪರ ಕೋರ್ಸ್ ಸೀಟು ಹಂಚಿಕೆಗೆ ಈ ವರ್ಷ ಕೇವಲ ಸಿಇಟಿ ಪರೀಕ್ಷೆಯ ಅಂಕಗಳೇ ಮಾನದಂಡ ವನ್ನಾಗಿ ಪರಿಗಣಿಸಲು ಉನ್ನತ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಸಿಇಟಿ ಪರೀಕ್ಷೆ ಸಂಬಂಧ ಇಂದು ಉನ್ನತ ಶಿಕ್ಷಣ ಇಲಾಖೆ ಸಚಿವ ಅಶ್ವತ್ಥನಾರಾಯಣ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ಸಭೆ ನಡೆಯಿತು.

ಸೀಟು ಹಂಚಿಕೆಗೆ ಈ ವರ್ಷ ಪಿಯುಸಿಯ ಶೇ.50 ಅಂಕ ಪರಿಗಣಿಸದೇ ಇರಲು ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವಥನಾರಾಯಣ ತಿಳಿಸಿದ್ದಾರೆ.

ನಿಗದಿಯಂತೆ ಆಗಸ್ಟ್ 28, 29ಕ್ಕೆ ಸಿಇಟಿ ಪರೀಕ್ಷೆ:

ನಿಗದಿಯಂತೆ ಆಗಸ್ಟ್ 28, 29 ಮತ್ತು 30ಕ್ಕೆ ಸಿಇಟಿ ಪರೀಕ್ಷೆ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಒಂದು ವೇಳೆ ಕೋವಿಡ್ ಪ್ರಕರಣಗಳು ಜಾಸ್ತಿಯಾದರೆ ಮಾತ್ರ ದಿನಾಂಕವನ್ನು ಮುಂದೂಡಲು ಇಲಾಖೆ ಮುಂದಾಗಿದೆ.

28ಕ್ಕೆ ಗಣಿತ, ಜೀವಶಾಸ್ತ್ರ, 29ಕ್ಕೆ ಬೌತಶಾಸ್ತ್ರ, ರಸಾಯನಶಾಸ್ತ್ರ,  30ಕ್ಕೆ ಗಡಿನಾಡು, ಹೊರನಾಡು ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ ನಡೆಯಲಿದೆ.

ಸಭೆಯಲ್ಲಿ ಸಿಇಟಿ ಪರೀಕ್ಷೆ ಬರೆಯಲು ಇದ್ದ ಅರ್ಹತೆ ಅಂಕಗಳ ಮಾನದಂಡ ಬದಲಾವಣೆಗೂ ನಿರ್ಧಾರ ಮಾಡಲಾಗಿದೆ. ಈ ವರ್ಷ ಗ್ರೇಡ್ ಆಧಾರದಲ್ಲಿ ಪಿಯುಸಿ ಫಲಿತಾಂಶ ನೀಡುತ್ತಿರುವ ಕನಿಷ್ಠ ಅಂಕಗಳ ಮಾನದಂಡ ನಿಯಮ ಸಡಿಲಿಕೆ ಮಾಡಲಾಗಿದ್ದು ವಿಜ್ಞಾನ ವಿಭಾಗದ ಎಲ್ಲ ವಿದ್ಯಾರ್ಥಿಗಳಿಗೂ ಸಿಇಟಿ ಬರೆಯಲು ಅವಕಾಶ ನೀಡಲಾಗಿದೆ.

ಎಲ್ಲ ವಿದ್ಯಾರ್ಥಿಗಳಿಗೂ ಅವಕಾಶ:

ಪಿಯುಸಿಯಲ್ಲಿ ಪಾಸ್ ಆದ ವಿದ್ಯಾರ್ಥಿಗಳು ಸಿಇಟಿ ಬರೆಯಲು ಕನಿಷ್ಠ ಶೇ.40-45 ಅಂಕ ಕಡ್ಡಾಯವಾಗಿ ಪಡೆಯಬೇಕಿತ್ತು. ಈ ಅಂಕಗಳನ್ನು ಪಡೆಯದೇ ಇದ್ದಲ್ಲಿ ಸಿಇಟಿ ಬರೆಯಲು ಅರ್ಹತೆ ಪಡೆಯುತ್ತಿರಲಿಲ್ಲ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಓಬಿಸಿ, ಸಾಮಾನ್ಯ ವಿದ್ಯಾರ್ಥಿಗಳಿಗೆ ಕನಿಷ್ಠ ಅಂಕ ನಿಯಮ ನಿಗದಿ ಮಾಡಲಾಗಿತ್ತು.

ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್, ಕಾಲೇಜು ಶಿಕ್ಷಣ ಆಯುಕ್ತ ಪ್ರದೀಪ್, ಕೆಇಎ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

ಮೊದಲನೇ ವರ್ಷದ/ ಮೊದಲನೇ ಸೆಮಿಸ್ಟರ್ ನ ಇಂಜಿನಿಯರಿಂಗ್, ತಂತ್ರಜ್ಞಾನ, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನದ ಕೋರ್ಸ್‍ಗಳು, ಮತ್ತು ಬಿ-ಫಾರ್ಮಾ-ಡಿ ಕೋರ್ಸ್‍ಗಳ ಪ್ರವೇಶಕ್ಕಾಗಿ ಸಿಇಟಿ ಪರೀಕ್ಷೆಯನ್ನು ನಡೆಸಲಾಗುತ್ತದೆ./////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');