7ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ; ಆನ್‌ಲೈನ್‌ನಲ್ಲಿ ಯೋಗ ಕಾರ್ಯಕ್ರಮ ಆಯೋಜನೆ; ಜೂಮ್ ಮೀಟಿಂಗ್ ಐ.ಡಿ. ಇಲ್ಲಿದೆ

0

ಬೆಳಗಾವಿ: ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆನ್‌ಲೈನ್‌ನಲ್ಲಿ ಜೂಮ್ ಮತ್ತು ಯೂಟ್ಯೂಬ್ ಗಳ ಮೂಲಕ  ಯೋಗ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಡಾ.ಎಚ್.ಡಿ. ಕೋಳೆಕರ ತಿಳಿಸಿದ್ದಾರೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ(ನಿಮ್ಹಾನ್ಸ್),ಪರಿವರ್ತನಾ ಯೋಗ ಫೌಂಡೇಶನ್ ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆಗಳ ಸಹಯೋಗದಲ್ಲಿ ಆನ್‌ಲೈನ್‌ನಲ್ಲಿ ಯೋಗ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.

ಜೂ.11 ರಿಂದ 21 ರವರೆಗೆ ಪ್ರತಿ ದಿನ ಬೆಳಿಗ್ಗೆ 6.30 ರಿಂದ 8 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ಜೂಮ್ ಮತ್ತು ಯೂಟ್ಯೂಬ್ ಗಳ ಮೂಲಕ ಯೋಗ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.

ಕಾರ್ಯಕ್ರಮಗಳ ಜೂಮ್ ಲಿಂಕ್ ಮೀಟಿಂಗ್ ಐ. ಡಿ: 88904655436 ಹಾಗೂ ಪಾಸ್ ಕೋಡ್: 429186 ಆಗಿದೆ. ಅದೇ ರೀತಿ, ಯೂಟ್ಯೂಬ್ ಲೈವ್  ಲಿಂಕ್‌: https://youtube.com/c/YuvaSpandana ದಲ್ಲಿಯೂ ಸಹ  ಯೋಗ ಕಾರ್ಯಕ್ರಮಗಳನ್ನು ವೀಕ್ಷಿಸಬಹುದಾಗಿದೆ.

ಈ ಯೋಗ ಕಾರ್ಯಕ್ರಮದಲ್ಲಿ ಯುವಜನರು, ಕ್ರೀಡಾಪಟುಗಳು, ಯುವ ಸಂಘದ ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಡಾ.ಎಚ್.ಡಿ. ಕೋಳೆಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');