ಕೋವಿಡ್ ಪ್ರಕರಣಗಳ ಹೆಚ್ಚಳ ಹಿನ್ನೆಲೆ:ಜೂನ್ 14 ರ ಬೆಳಿಗ್ಗೆ 6 ಗಂಟೆಯವರೆಗೆ ಇರುವ ನೀಷೆಧಾಜ್ಞೆಯನ್ನು ಜೂನ್ 21 ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ

0

ಬೆಳಗಾವಿ, ಜೂ.11 :ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗೃತಾ ಕ್ರಮವಾಗಿ ಜೂನ್ 21ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.


ಜಿಲ್ಲೆಯಲ್ಲಿ ಕೋರೊನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ 7 ರ ಬೆಳಿಗ್ಗೆ 6 ಗಂಟೆಯಿಂದ ಜೂನ್ 14 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಹೊರಡಿಸಲಾಗಿತ್ತು.
ಆದರೆ, ಕೊವಿಡ್ ಪ್ರಕರಣಗಳಲ್ಲಿ ಪ್ರತಿದಿನ ಹೆಚ್ಚಳ ಕಂಡುಬರುತ್ತಿರುವುದರಿಂದ ಜೂನ್ 14 ರ ಬೆಳಿಗ್ಗೆ 6 ಗಂಟೆಯವರೆಗೆ ಇರುವ ನೀಷೆಧಾಜ್ಞೆಯನ್ನು ಜೂನ್ 21 ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ.
ಅವಶ್ಯಕ ಚಟುವಟಿಕೆಗಳು ಹಾಗೂ ತಾಲೂಕಾ ಮಟ್ಟದ ವಿಪತ್ತು ನಿರ್ವಹಣಾ ಸಮಿತಿಯಿಂದ ಪೂರ್ವಾನುಮತಿ ಪಡೆದುಕೊಂಡ ಚಟುವಟಿಕೆಗಳಿಗೆ ಮಾತ್ರ ಅವಕಾಶವಿರುತ್ತದೆ.
ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳಾದ ಎಂ.ಜಿ.ಹಿರೇಮಠ ಅವರು ಎಚ್ಚರಿಕೆ ನೀಡಿದ್ದಾರೆ.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');