ಲಾಕ್ ಡೌನ್ ನಂತರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಿಷ್ಠಗೊಳಿಸುವೆ:ಸತೀಶ ಜಾರಕಿಹೊಳಿ

0

ಅಥಣಿ : ಕಾಗವಾಡ ಕ್ಷೇತ್ರದಿಂದ ಪ್ರಾರಂಭಿಸಿ ಬೆಳಗಾವಿ ಜಿಲ್ಲೆಯ ಎಲ್ಲಾ ಕಡೆಗಳಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.

ತಾಲೂಕಿನ ಸಿದ್ದೆವಾಡಿ ಗ್ರಾಮದಲ್ಲಿ ಮಾದಣ್ಣ ಮದಗೊಂಡ ಸಿದ್ದಾಶ್ರಮದ ವತಿಯಿಂದ ನಿರ್ಮಾಣವಾಗುತ್ತಿರುವ ಅನಾಥಾಶ್ರಮ ಕಟ್ಟಡ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರೋಹಿಣಿ ಸಿಂಧೂರಿಯವರ ವಿಷಯ ಮೈಸೂರು ಜಿಲ್ಲೆಗೆ ಸೀಮಿತವಾಗಿದ್ದು ಸರ್ಕಾರವಿದೆ ಸ್ಥಳೀಯ ಜನಪ್ರತಿನಿಧಿಗಳು ಬಗೆಹರಿಸುವ ವಿಷಯವಾಗಿದೆ ಅದು ಮೈಸೂರಿನ ಆಂತರಿಕವಾದ ವಿಷಯವಾಗಿದೆ ಎಂದು ತಿಳಿಸಿದರು.

ಕಾಗವಾಡ ಕ್ಷೇತ್ರ ಅಷ್ಟೇ ಅಲ್ಲದೆ ಇಡೀ ರಾಜ್ಯ ಹಾಗೂ ಬೆಳಗಾವಿ ಜಿಲ್ಲೆಯಲ್ಲೂ ಸಂಚರಿಸಿ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಬೆಳೆಸಲು ಲಾಕ್ ಡೌನ್ ನಂತರ ಸಂಚಾರ ಆರಂಭ ಮಾಡಲಾಗುವುದು ಎಂದು ಹೇಳಿದರು./////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');