ಗುಜರಾತ್ ವಿಧಾನಸಭಾ ಚುನಾವಣೆಗೆ ಎಲ್ಲ ಕ್ಷೇತ್ರಗಳಲ್ಲೂ ‘ಆಪ್‌’ ಸ್ಪರ್ಧೆ; ಕೇಜ್ರಿವಾಲ್ ಘೋಷಣೆ

0

ಅಹಮದಾಬಾದ್‌: “2022ರ ಗುಜರಾತ್‌ ವಿಧಾನಸಭಾ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ (ಎಎಪಿ) ಎಲ್ಲ ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ” ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಘೋಷಿಸಿದ್ದಾರೆ.

ಅಹಮದಾಬಾದ್ ನಲ್ಲಿ ಸೋಮವಾರ ಪಕ್ಷದ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಕೇಜ್ರಿವಾಲ್, “ಗುಜರಾತ್‌ನಲ್ಲಿ 182 ವಿಧಾನಸಭಾ ಕ್ಷೇತ್ರಗಳಿವೆ. ಆಪ್‌ ಎಲ್ಲ ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದೆ. ಕಾಂಗ್ರೆಸ್, ಬಿಜೆಪಿಗೆ ಪರ್ಯಾಯ ಶಕ್ತಿಯಾಗಿ ಹೊರಮ್ಮಲಿದೆ. ಶೀಘ್ರದಲ್ಲೇ ಗುಜರಾತ್‌ ಬದಲಾವಣೆ ಕಾಣಲಿದೆ” ಎಂದು ಹೇಳಿದರು.

“ಗುಜರಾತ್‌ನಲ್ಲಿರುವ ಆಡಳಿತ ಪಕ್ಷ ಬಿಜೆಪಿ ಮತ್ತು ವಿರೋಧ ಪಕ್ಷ ಕಾಂಗ್ರೆಸ್‌ಗಿಂತ ಆಮ್‌ ಆದ್ಮಿ ಪಕ್ಷ ಹೆಚ್ಚು ವಿಶ್ವಾಸಾರ್ಹವಾದ ಪಕ್ಷವಾಗಿದೆ” ಎಂದರು.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');