ಖಾನಾಪುರ : ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ, ಸರ್ಕಾರದ ವಿರುದ್ಧ ಕಿಡಿ ಕಾರಿದ ಶಾಸಕಿ ಅಂಜಲಿ ನಿಂಬಾಳ್ಕರ್

0

ಖಾನಾಪುರ : ತೈಲ ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.

ನಗರದ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಧರಣಿ ನಡೆಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.

ಕೊರೊನಾ ಸಂಕಷ್ಟದಲ್ಲಿ  ಸರ್ಕಾರ ತೈಲ, ಅಡುಗೆ , ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಗಾಯದ ಮೇಲೆ ಬರೆ ಎಳೆದಿದೆ.

ಬಡವರು ಕೆಲಸವಿಲ್ಲದೆ ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಎಲ್ಲವೂಗಳ ಬೆಲೆ ಏರಿಕೆಯಿಂದ ಸಾರ್ವಜನಿಕರು ಮಾನಸಿಕ‌ ಹಿಂಸೆ ಅನುಭವಿಸುತ್ತಿದ್ದಾರೆ. ಬಿಜೆಪಿ ಸರ್ಕಾರದ ಆಡಳಿತದಿಂದ ಯುವಕರು ಉದ್ಯೋಗ ಕಳೆದುಕೊಂಡಿದ್ದಾರೆ. ಬಿಜೆಪಿ ಸರ್ಕಾರ ಬಡವರಿಗೆ ಅನ್ಯಾಯ ಮಾಡುತ್ತಿದೆ ಎಂದು ಕಿಡಿ ಕಾರಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ತಾವು ಮಾಡಿದ್ದೇ ಸರಿ ಎನ್ನುವ ಮನೋಭಾವದಲ್ಲಿ ಇದೆ. ತಕ್ಷಣ ಸರ್ಕಾರ ಎಚ್ಚೆತ್ತುಕೊಂಡು ಎಲ್ಲ ವಸ್ತುಗಳ, ತೈಲ, ಸಿಲಿಂಡರ್ ಬೆಲೆ ಇಳಿಸಬೇಕೆಂದು ಒತ್ತಾಯಿಸಿದರು.

ಕಾಂಗ್ರೆಸ್ ಬ್ಲಾಕ್ , ಯೂತ್ ಬ್ಲಾಕ್ ಕಾಂಗ್ರೆಸ್ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು./////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');