ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ಪೂರ್ಣಗೊಳಿಸಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

0

ಅಥಣಿ: “ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ಪೂರ್ಣಗೊಳಿಸಲಿ ಎಂಬುದು ನಮ್ಮ ಆಸೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಅಥಣಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅವರನ್ನು ಅಧಿಕಾರದಿಂದ ಇಳಿಸುವ ಪ್ರಶ್ನೆ ಸದ್ಯಕ್ಕಿಲ್ಲ. ಮುಖ್ಯಮಂತ್ರಿಗಳು ಕೆಲಸ ಮಾಡಲಿ. ನಾಯಕತ್ವ ಬದಲಾವಣೆಯ ವಿಷಯದಲ್ಲಿ ನಮ್ಮ ಪಕ್ಷಕ್ಕೆ ಲಾಭ ಮಾಡಿಕೊಳ್ಳುವ ಯಾವುದೇ ಉದ್ದೇಶವಿಲ್ಲ. ಅದು ಅವರ ಪಕ್ಷದ ವಿಚಾರ” ಎಂದು ಪ್ರತಿಕ್ರಿಯಿಸಿದರು.

ತಾಲೂಕು ಆಸ್ಪತ್ರೆಗ ಭೇಟಿ:

“ಕಾಂಗ್ರೆಸ್ ಪಕ್ಷದ ನಿಯೋಗದಿಂದ ಜಿಲ್ಲೆಯ ವಿವಿಧ ತಾಲೂಕು ಆಸ್ಪತ್ರೆಗಳಿಗೆ ಇಂದು ಭೇಟಿ ನೀಡುತ್ತಿದ್ದೇವೆ. ಆಸ್ಪತ್ರೆಗಳಲ್ಲಿ ಏನು ಸಮಸ್ಯೆಯಿದೆ? ಈಗಿನವರೆಗೆ ಕೋವಿಡ್ ಸೋಂಕಿತರಿಗೆ ಯಾವ ರೀತಿ ಚಿಕಿತ್ಸೆ ನೀಡಲಾಗಿದೆ? ಎಂಬುದರ ಕುರಿತು ಹಾಗೂ ಆಸ್ಪತ್ರೆಗಳಲ್ಲಿನ ಮೂಲಭೂತ ಸಮಸ್ಯೆ ಮತ್ತು ಅವಶ್ಯಕತೆಯ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ. ಆಸ್ಪತ್ರೆಗಳ ವೈದ್ಯರೊಂದಿಗೆ ಚರ್ಚಿಸುತ್ತಿದ್ದೇವೆ. ವೈದ್ಯರು ತಿಳಿಸುವ ಸಮಸ್ಯೆಗಳು ಹಾಗೂ ಅಗತ್ಯತೆಗಳ ಬಗ್ಗೆ ಪಕ್ಷದಿಂದ ಸರ್ಕಾರದ ಗಮನಕ್ಕೆ ತರಲಾಗುವುದು” ಎಂದು ಸತೀಶ ತಿಳಿಸಿದರು.

“ಕೆಲ ದಿನಗಳ ಹಿಂದೆಯೇ ಹುಕ್ಕೇರಿ, ನಿಪ್ಪಾಣಿ, ಚಿಕ್ಕೋಡಿ, ಬೈಲಹೊಂಗಲ ತಾಲೂಕು ಆಸ್ಪತ್ರೆ ಹಾಗೂ ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಲಾಗಿದೆ. ಇಂದು ಅಥಣಿ, ಕುಡಚಿ ಹಾಗೂ ರಾಯಬಾಗ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ್ದೇವೆ” ಎಂದರು.

“ಕೊರೊನಾ ಸೋಂಕಿತರು ಕಡಿಮೆಯಾಗಿರುವುದರಿಂದ ಸದ್ಯಕ್ಕೆ ಜಿಲ್ಲೆಯಲ್ಲಿ ಆಕ್ಸಿಜನ್ ಸಮಸ್ಯೆ, ಬೆಡ್ ಕೊರತೆ ಇಲ್ಲ.ಮುಂದೆ ಈ ರೀತಿಯ ಸಮಸ್ಯೆ ಬರದಂತೆ ಈಗಲೇ ಸಿದ್ಧತೆ ಮಾಡಿಕೊಳ್ಳಬೇಕಿದೆ. ಇಂತಹ ಸಮಸ್ಯೆ ಮುಂದೆ ಬರಬಾರದು ಎಂಬ ಉದ್ದೇಶದಿಂದಲೇ ಕಾಂಗ್ರೆಸ್ ನಿಂದ ಸರ್ಕಾರವನ್ನು ಈಗಲೇ ಎಚ್ಚರಿಸುವ ಕೆಲಸ ಮಾಡುತ್ತಿದ್ದೇವೆ” ಎಂದು ಹೇಳಿದರು.

ಸರಿಯಾದ ಸಮೀಕ್ಷೆ ನಡೆಯುತ್ತಿಲ್ಲ:

“ಕೊರೊನಾ ಸಾವುಗಳ ಬಗ್ಗೆ ಸರ್ಕಾರದಿಂದ ಸರಿಯಾದ ಸಮೀಕ್ಷೆ ನಡೆಯುತ್ತಿಲ್ಲ. ಮನೆಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಿಧನರಾದವರ ಅಂಕಿ-ಸಂಖ್ಯೆಯನ್ನು ಸರ್ಕಾರ ಲೆಕ್ಕಕ್ಕೆ ಪರಿಗಣಿಸುತ್ತಿಲ್ಲ. ಇದರಿಂದ ಸರ್ಕಾರ 500 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದರೇ, ಮೃತಪಟ್ಟವರ ಸಂಖ್ಯೆಯನ್ನು ನಾವು 1500 ಎಂದು ಪರಿಗಣಿಸುವಂತಾಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವೈದ್ಯಾಧಿಕಾರಿಗಳೊಂದಿಗೆ ಚರ್ಚೆ:
ಇದಕ್ಕೂ ಮುಂಚೆ ಸತೀಶ ಜಾರಕಿಹೊಳಿ ಅವರು ಇಲ್ಲಿನ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹಾಗೂ ಇನ್ನಿತರ ಇಲಾಖೆಯ ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದರು. ಆಸ್ಪತ್ರೆಯಲ್ಲಿನ  ಸಮಸ್ಯೆಗಳು ಹಾಗೂ ಅಗತ್ಯತೆಗಳ ಬಗ್ಗೆ ಮಾಹಿತಿ ಪಡೆದರು.

 

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಲಕ್ಷ್ಮಣರಾವ್ ಚಿಂಗಳೆ, ವೀರಕುಮಾರ ಪಾಟೀಲ, ಗಜಾನನ ಮಂಗಸೂಳಿ, ಅಥಣಿ ಮತ್ತು ತೆಲಸಂಗ ಬ್ಲಾಕ್ ಅಧ್ಯಕ್ಷರಾದ ಸಿದ್ದಾರ್ಥ್ ಸಿಂಗೆ, ಶ್ರೀಕಾಂತ ಪೂಜಾರಿ, ಮುಖಂಡರಾದ ಅಸ್ಲಾಂ ನಾಲಬಂದ, ಸದಾಶಿವ ಬುಟಾಲಿ, ಬಸು ಬುಟಾಲಿ, ಅನಿಲ್ ಸುಣದೋಳಿ, ಸುನಿಲ್ ಸಂಖ, ಶಿವು ಗುಡ್ಡಾಪುರ್, ರಾವಸಾಬ ಐಹೊಳೆ, ಸುನಿತಾ ಐಹೊಳೆ, ದರೆಪ್ಪಾ ಠಕ್ಕಣ್ಣವರ್, ಉಮರ ಸೈಯದ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');