ಬಿಮ್ಸ್ ನಲ್ಲಿ ಸ್ವಯಂಪ್ರೇರಿತ ರಕ್ತ ದಾನ ಶಿಬಿರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ

0

ಬೆಳಗಾವಿ, ಜೂ.14 : ಬಿಮ್ಸ್ ಆಸ್ಪತ್ರೆಯ ರಕ್ತಭಂಡಾರದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಹಾಗೂ ಸ್ವಯಂಪ್ರೇರಿತ ರಕ್ತ ದಾನ ಶಿಬಿರವನ್ನು ಏರ್ಪಡಿಸಲಾಯಿತು.

ಈ ಶಿಬಿರವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬಿಮ್ಸ್ ಜಿಲ್ಲಾ ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ ರಕ್ತದಾನದ ಮಹತ್ವವನ್ನು ತಿಳಿಸಿದರು ಹಾಗೂ ಶಿಬಿರದಲ್ಲಿ ಭಾಗವಹಿಸಿದ್ದ ಎಲ್ಲ ರಕ್ತದಾನಿಗಳಿಗೆ ಕೃತಜ್ಞತೆ ತಿಳಿಸಿದರು.

ಈ ಶಿಬಿರದಲ್ಲಿ 25 ದಾನಿಗಳು ರಕ್ತದಾನವನ್ನು ಮಾಡಿದರು. ಅಲ್ಲದೇ, ಈ ಕಾರ್ಯಕ್ರಮದಲ್ಲಿ ಸುಮಾರು ವರ್ಷಗಳಿಂದ ರಕ್ತದಾನ ಮಾಡುತ್ತಿರುವ ಗಣ್ಯರಿಗೆ ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಬಿಮ್ಸ್ ನಿರ್ದೇಶಕರಾದ ಡಾ. ಕುಲಕರ್ಣಿ, ವೈದ್ಯಕೀಯ ಅಧೀಕ್ಷಕರಾದ ಡಾ. ದಂಡಿನ, ಮುಖ್ಯ ಆಡಳಿತ ಅಧಿಕಾರಿ ಆಫ್ರೀನಬಾನು ಬಳ್ಳಾರಿ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ಸುಧಾಕರ್, ಸ್ಥಳೀಯ ವೈದ್ಯಾಧಿಕಾರಿ ಡಾ.ಕೇಶವ ಹಾಜರಿದ್ದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮುನ್ಯಾಳ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಕೊರಬು, ರಕ್ತಭಂಡಾರದ ವೈದ್ಯಾಧಿಕಾರಿಗಳಾದ ಡಾ. ಶ್ರೀದೇವಿ ಬೋಬಾಟಿ, ಡಾ. ಗೀತಾಮಾಲಾ, ಡಾ. ಆರ್.ಜೆ. ಪಾಟೀಲ, ಪ್ರಯೋಗಾಲಯ ತಂತ್ರಜ್ಞರು, ಶುಶ್ರೂಷಕರು ಹಾಗೂ ಎಲ್ಲ ಸಿಬ್ಬಂದಿ ವರ್ಗದವರು ಹಾಜರಿದ್ದರು. ಡಾ. ಮಿಸಾಳೆ ವಂದಿಸಿದರು.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');