ರಾಯಬಾಗ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

0

ರಾಯಬಾಗ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೋಮವಾರ (ಜೂ.14) ಸಂಜೆ ಅಥಣಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು.

ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹಾಗೂ ಇನ್ನಿತರ ಇಲಾಖೆಯ ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದರು. ಆಸ್ಪತ್ರೆಗಳಲ್ಲಿ ಏನು ಸಮಸ್ಯೆಯಿದೆ? ಈಗಿನವರೆಗೆ ಕೋವಿಡ್ ಸೋಂಕಿತರಿಗೆ ಯಾವ ರೀತಿ ಚಿಕಿತ್ಸೆ ನೀಡಲಾಗಿದೆ? ಎಂಬುದರ ಕುರಿತು ಹಾಗೂ ಆಸ್ಪತ್ರೆಗಳಲ್ಲಿನ ಮೂಲಭೂತ ಸಮಸ್ಯೆ ಮತ್ತು ಅವಶ್ಯಕತೆಗಳ ಬಗ್ಗೆ ವೈದ್ಯಾಧಿಕಾರಿಗಳಿಂದ ಅವರು ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಅಧಿಕಾರಿಗಳು, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಸೇರಿ ಇನ್ನಿತರರು ಇದ್ದರು.

ಆಹಾರ ಕಿಟ್ ವಿತರಣೆ:

ಆಸ್ಪತ್ರೆ ಭೇಟಿ ನಂತರ, ಪಟ್ಟಣದಲ್ಲಿ ಸತೀಶ ಜಾರಕಿಹೊಳಿ ಅವರು ಪಟ್ಟಣ ಪಂಚಾಯತ ಹಾಗೂ ಗ್ರಾಮ ಪಂಚಾಯತನ ಕೊರೊನಾ ವಾರಿಯರ್ಸ್ ಗಳಿಗೆ ಆಹಾರ ಕಿಟ್ ವಿತರಣೆ ಮಾಡಿದರು. ನೂರಾರು ಕೊರೊನಾ ವಾರಿಯರ್ಸ್ ಗಳಿಗೆ ಆಹಾರ ಕಿಟ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಮಹಾವೀರ ಮೋಹಿತೆ, ವೀರಕುಮಾರ ಪಾಟೀಲ, ಲಕ್ಷ್ಮಣರಾವ್ ಚಿಂಗಳೆ, ಯಲ್ಲಪ್ಪ ಶಿಂಗೆ ಸೇರಿ ಇನ್ನಿತರರು ಇದ್ದರು.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');