ಬೆಳಗಾವಿ ಮತ್ತೆ ಎರಡು ದಿನ ಸಂಪೂರ್ಣ ಲಾಕ್ ಡೌನ್: ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ

0

ಬೆಳಗಾವಿ: ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಎರಡು ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಇಂದು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ಜೂ.19 ರ (ಶನಿವಾರ) ಬೆಳಿಗ್ಗೆ 6 ಗಂಟೆಯಿಂದ, ಜೂ. 21 ರ (ಸೋಮವಾರ) ಬೆಳಿಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ.

ಲಾಕ್ ಡೌನ್ ಅವಧಿಯಲ್ಲಿ ಸಾರ್ವಜನಿಕರು ಅನವಶ್ಯಕವಾಗಿ ಓಡಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆಸ್ಪತ್ರೆಗಳಿಗೆ, ಅಗತ್ಯ ವಸ್ತು ಖರೀದಿಗೆ, ಆನ್‍ಲೈನ್ ಫುಡ್ ಸರ್ವಿಸ್‍ಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಸರ್ಕಾರಿ ಅಧಿಕಾರಿಗಳಿಗೆ ಸರ್ಕಾರಿ ಸಭೆಗೆ ಹಾಜರಾಗಲು ಮಾತ್ರ ಅವಕಾಶ ನೀಡಲಾಗಿದೆ.

ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ 10 ಗಂಟೆಯವರೆಗೆ ಮಾತ್ರ ಕಾರ್ಯ ನಿರ್ವಹಿಸಬೇಕು. ರೈತ ಸಂಪರ್ಕ ಕೇಂದ್ರ ಹಾಗೂ ಹೆಚ್ಚುವರಿ ಮಳಿಗೆಗಳು ಮಧ್ಯಾಹ್ನ 12 ಗಂಟೆಯವರೆಗೆ ಅಂಗಡಿಗಳನ್ನು ತೆರೆದು ಬೀಜ ಹಾಗೂ ರಸಗೊಬ್ಬರಗಳನ್ನು ವಿತರಿಸಲು ಅವಕಾಶವಿರುತ್ತದೆ. ಪ್ರತಿ ಗ್ರಾಮದಿಂದ 5 ಜನರಿಗೆ ಮಾತ್ರ ರೈತ ಸಂಪರ್ಕ ಕೇಂದ್ರ ಹಾಗೂ ಹೆಚ್ಚುವರಿ ಮಳಿಗೆಗಳಿಗೆ ಹೋಗಲು ಅವಕಾಶವಿರುತ್ತದೆ. ಪೂರ್ವಾನುಮತಿ ಪಡೆದುಕೊಂಡು ನಿಗದಿಪಡಿಸಿರುವಂತಹ ಮದುವೆ ಸಮಾರಂಭಗಳಿಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');