ವ್ಯಾಪಕ ವಿರೋಧದ ನಡುವೆಯೂ ಪೆಟ್ರೋಲ್ , ಡೀಸೆಲ್ ಬೆಲೆ ಮತ್ತೆ ಏರಿಕೆ

0

ಹೊಸದಿಲ್ಲಿ: ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ದರ ಪ್ರತೀ ಲೀಟರ್ ಗೆ 26 ಪೈಸೆ ಮತ್ತು ಡೀಸೆಲ್ ದರ 14 ಪೈಸೆಯಷ್ಟು ಏರಿಕೆಯಾಗಿದೆ.

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಬುಧವಾರ ದೇಶಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಿದ್ದು, ಈ ಮೂಲಕ ದೇಶದ ಹಲವು ಜಿಲ್ಲೆಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ.

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮೂಲಗಳ ಪ್ರಕಾರ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 26 ರಿಂದ 28 ಮತ್ತು ಡೀಸೆಲ್ ದರ 14 ರಿಂದ 18 ಪೈಸೆಯವರೆಗೂ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 99.95 ರೂಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 92.72ರೂ ಗೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 96.72ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 87.46ರೂ ಗೆ ಏರಿಕೆಯಾಗಿದೆ.

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 102.88ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 94.89ರೂ ಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪೆಟ್ರೋಲ್ ದರ 96.63ಕ್ಕೆ ಏರಿಕೆಯಾಗಿದ್ದು, ಡೀಸೆಲ್ ದರ 90.31 ರೂ ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪೆಟ್ರೋಲ್ ದರ 97.96ಕ್ಕೆ ಏರಿಕೆಯಾಗಿದ್ದು, ಡೀಸೆಲ್ ದರ 92.09 ರೂ ಗೆ ಏರಿಕೆಯಾಗಿದೆ.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');