ದೇಶದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಇಳಿಕೆ; 2,542 ಸಾವು

0

ಹೊಸದಿಲ್ಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 62,224 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 2,542 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ ಈವರೆಗೆ ಸೋಂಕಿತರಾದವರ ಸಂಖ್ಯೆ 2,96,33,105 ತಲುಪಿದೆ. 3,79,573 ಮಂದಿ ಮೃತಪಟ್ಟಿದ್ದಾರೆ. 2,83,88,100 ಮಂದಿ ಗುಣಮುಖರಾಗಿದ್ದಾರೆ.

ಪ್ರತಿ ದಿನದ ಸೋಂಕು ಪತ್ತೆ ಪ್ರಮಾಣ ಶೇ 3.22ಕ್ಕೆ ಇಳಿಕೆಯಾಗಿದೆ. ಕಳೆದ 9 ದಿನಗಳಿಂದ ಇದು ಶೇ 5ಕ್ಕಿಂತ ಕೆಳಗೆ ಇದೆ. ವಾರದ ಸೋಂಕು ಪತ್ತೆ ಪ್ರಮಾಣವೂ ಶೇ 4.17ಕ್ಕೆ ಇಳಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಗುಣಮುಖರಾಗುತ್ತಿರುವವರ ಸಂಖ್ಯೆ ಕಳೆದ 34 ದಿನಗಳಿಂದ ದಿನದ ಹೊಸ ಪ್ರಕರಣಗಳ ಸಂಖ್ಯೆಗಿಂತ ಹೆಚ್ಚಿದೆ ಎಂದು ಸಚಿವಾಲಯ ತಿಳಿಸಿದೆ. ಸದ್ಯ ದೇಶದಲ್ಲಿ 8,65,432 ಸಕ್ರಿಯ ಪ್ರಕರಣಗಳಿವೆ. ದೇಶದಾದ್ಯಂತ ಈವರೆಗೆ 26,19,72,014 ಡೋಸ್ ಲಸಿಕೆ ನೀಡಲಾಗಿದೆ.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');